Advertisement

Ram mandir ಉದ್ಘಾಟನೆಗೆ ಖರ್ಗೆ, ಸೋನಿಯಾ ಹಾಜರಿ ಬಗ್ಗೆ ಶೀಘ್ರ ನಿರ್ಣಯ: ಕಾಂಗ್ರೆಸ್‌

11:57 PM Dec 29, 2023 | Team Udayavani |

ಹೊಸದಿಲ್ಲಿ: ಶ್ರೀರಾಮ ಮಂದಿರದ ಉದ್ಘಾಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗವಹಿಸಲಿದ್ದಾರೆಯೇ ಇಲ್ಲವೇ ಎಂಬುದರ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್‌ ತಿಳಿಸಿದೆ.

Advertisement

ಈ ಬಗ್ಗೆ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ. ಅವರು ಕಾರ್ಯಕ್ರಮಕ್ಕೆ ಹೋಗುವುದರ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಣಯ ತೆಗೆದುಕೊಂಡು ತಿಳಿಸಲಾಗುವುದು ಎಂದಿದ್ದಾರೆ. ಜ.22ರಂದು ಮಂದಿರ ಉದ್ಘಾಟನೆ ನಡೆಯಲಿದ್ದು, ಈಗಾಗಲೇ ಟಿಎಂಸಿ ಮತ್ತು ಎಡಪಕ್ಷಗಳ ನಾಯಕರು ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next