ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು.
Advertisement
ನಗರದ ಶಾಸಕರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಭಾಗದಕೃಷಿಕರು ಹಾಗೂ ಇನ್ನಿತರ ಸಮುದಾಯಗಳ ನಿರುದ್ಯೋಗಿಗಳಿಗೆ ಅನುಕೂಲವಾಗುವಂತೆ ಜಿಟಿಟಿಸಿ ಕೇಂದ್ರ ಸ್ಥಾಪನೆ ಮಾಡುವಂತೆ 2016ರಲ್ಲಿ ನಾನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದೆ.
ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಪದವಿಯಲ್ಲಿ ಪಾಸ್ ಆದ ಮತ್ತು ಫೇಲ್ ಆದ ಎಲ್ಲರೂ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ. ತರಬೇತಿ ಅವಧಿಯಲ್ಲಿ ಉತ್ತಮ ಫಲಿತಾಂಶ ಪಡೆದವರಿಗೆ ಪ್ರಮಾಣಪತ್ರ ನೀಡುವ ಜೊತೆಗೆ ಉದ್ಯೋಗಾವಕಾಶವನ್ನೂ ಒದಗಿಸಲಾಗುವುದು. ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿ ಸುಮಾರು 25 ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಈ ಕಾರ್ಯ ಸಹ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದರು.
Related Articles
ಈ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿ ಸಲಾಗುವುದು. ಕ್ಷೇತ್ರದ ಜನತೆಯ ವಿಶ್ವಾಸಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆಯಾಗದಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
Advertisement
ನಾನು ಕಳೆದ ಅವಧಿಯಲ್ಲಿ ಶಾಸಕನಾಗಿ ನೀಡಿದ್ದ ಚುನಾವಣಾ ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಅವಧಿಯಲ್ಲೂ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.ಟಿ. ರಘುಮೂರ್ತಿ, ಶಾಸಕರು.