Advertisement
ಬೈಂದೂರಲ್ಲಿ ಜಿಲ್ಲಾಧಿಕಾರಿಗಳು ಶೀಘ್ರ ಪ್ರಸ್ತಾವನೆ ವಿವರವನ್ನು ಸರಕಾರಕ್ಕೆ ಸಲ್ಲಿಸಿದರೆ ಶೀಘ್ರ ಮಿನಿ ವಿಧಾನಸೌಧವನ್ನು ಮಂಜೂರು ಮಾಡಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
Related Articles
ಈ ಸಂದರ್ಭದಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ, ಹಿರಿಯರಾದ ಜಗನ್ನಾಥ ಶೆಟ್ಟಿ, ಸುಬ್ರಾಯ ಶೇರುಗಾರ್, ಬೈಂದೂರು ವಿಶೇಷ ತಹಶೀಲ್ದಾರ್ ಕಿರಣ ಗೌರಯ್ಯ ಅವರನ್ನು ಸಮ್ಮಾನಿಸಲಾಯಿತು.
Advertisement
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಕುಂದಾಪುರ ಉಪವಿಭಾಗಾಧಿಕಾರಿ ಟಿ. ಭೂಬಾಲನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಬಾಬು ಶೆಟ್ಟಿ, ಸುರೇಶ ಬಟ್ವಾಡಿ, ಗೌರಿ ದೇವಾಡಿಗ, ಜಿಲ್ಲಾ ಕೆ.ಡಿ.ಪಿ ಸದಸ್ಯ ಎಸ್.ರಾಜು ಪೂಜಾರಿ, ತಾ.ಪಂ. ಸದಸ್ಯರಾದ ವಿಜಯ ಶೆಟ್ಟಿ ಕಾಲೊ¤àಡು, ಸುಜಾತಾ ದೇವಾಡಿಗ, ಜಗದೀಶ ದೇವಾಡಿಗ, ಶ್ಯಾಮಲಾ ಕುಂದರ್, ಗಿರಿಜಾ ಖಾರ್ವಿ, ಮಾಲಿನಿ ಕೆ., ಮೌಲಾನ ದಸ್ತಗೀರ್, ಪುಷ್ಪರಾಜ್ ಶೆಟ್ಟಿ, ಗ್ರೀಷ್ಮಾ ಗಿರಿಧರ ಭೀಡೆ, ಜಗದೀಶ ಪೂಜಾರಿ, ಪ್ರಮೀಳಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ವಿಶೇಷ ತಹಶೀಲ್ದಾರ್ ಕಿರಣ ಗೌರಯ್ಯ ಸ್ವಾಗತಿಸಿದರು. ಕುಂದಾಪುರ ತಹಶೀಲ್ದಾರ್ ಜಿ. ಎಂ. ಬೋರ್ಕರ್ ವಂದಿಸಿದರು.
94 ಸಿ: ಶೀಘ್ರ ವಿಲೇವಾರಿಗೆ ಸೂಚನೆರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯು ಭೂಮಿಯ ಹಕ್ಕು ಪತ್ರ ವನ್ನು ತನ್ನ ಜೀವಿತ ಅವಧಿಯಲ್ಲಿ ಪಡೆಯಬೇಕು. ಅದನ್ನು ಸಮರ್ಪಕ ರೀತಿಯಲ್ಲಿ ನೀಡುವ ಕಾರ್ಯ ವನ್ನು ಅಧಿಕಾರಿಗಳು ಮಾಡಬೇಕು. 94 ಸಿ ಅರ್ಜಿ ವಿಲೇವಾರಿ ಗಳನ್ನು ತ್ವರಿತಗತಿಯಲ್ಲಿ ನೀಡುವಂತೆ ಹಾಗೂ ಈ ವಿಚಾರವನ್ನು ಗಂಭೀರವಾಗಿ ಪರಿ ಗಣಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಂದೊಮ್ಮೆ ಅರ್ಜಿ ನೀಡದೆ ನಿವೇಶನ ಕಟ್ಟಿದ್ದರೆ ಅಂತವರಿಂದ ಅರ್ಜಿ ಗಳನ್ನು ಪಡೆಯಬೇಕು. ಜನಪರ ಸೇವೆ ನೀಡಿದಾಗ ಮಾತ್ರ ಜನರ ಗೌರವ ದೊರೆಯುತ್ತದೆ.
– ಕಾಗೋಡು ತಿಮ್ಮಪ್ಪ , ಕಂದಾಯ ಸಚಿವ