Advertisement
ವಿದೇಶಾಂಗ ಖಾತೆ ಸಹಾಯಕ ಸಚಿವ ಜ| ವಿ.ಕೆ. ಸಿಂಗ್ ಅವರೇ ಈ ವಿಚಾರ ತಿಳಿಸಿದ್ದಾರೆ. ಪ್ರಸಕ್ತ ವರ್ಷ 150 ಅಂಚೆ ಕಚೇರಿಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು. ಇನ್ನೆರಡು ವರ್ಷಗಳಲ್ಲಿ ದೇಶಾದ್ಯಂತದ ಎಲ್ಲ 800 ಜಿಲ್ಲೆಗಳಲ್ಲೂ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ. ದೂರದ ಪ್ರದೇಶಗಳಲ್ಲಿ ಅಥವಾ ಕುಗ್ರಾಮಗಳಲ್ಲಿ ವಾಸಿಸುತ್ತಿರುವವರಿಗೂ ಪಾಸ್‌ಪೋರ್ಟ್ ಸೇವೆ ಸುಲಭ ವಾಗಿ ಎಟುಕಲಿ ಎಂಬ ಉದ್ದೇಶದಿಂದ ಈ ಯೋಜನೆ ಹಾಕಿ ಕೊಳ್ಳಲಾಗಿದೆ. ಪಾಸ್‌ಪೋರ್ಟ್‌ಗಾಗಿ ಯಾರು ಕೂಡ ಬಹಳ ದೂರದವರೆಗೆ ಹೋಗುವಂತಾಗಬಾರದು ಎಂಬುದು ನಮ್ಮ ಅಭಿಲಾಷೆ ಎಂದು ಅವರು ಹೇಳಿದ್ದಾರೆ. ಜತೆಗೆ ಪಾಸ್‌ಪೋರ್ಟ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವಂತೆ ಮಾಡಲಾಗುವುದು ಮತ್ತು ಈ ಸೇವೆಯಿಂದ ಮಧ್ಯವರ್ತಿಗಳು ದೂರ ಇರುವಂತೆ ನೋಡಿಕೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ. Advertisement
800 ಅಂಚೆ ಕಚೇರಿಗಳಲ್ಲಿ ಶೀಘ್ರ ಪಾಸ್ಪೋರ್ಟ್ ಕೇಂದ್ರ
02:11 PM Jun 14, 2017 | Harsha Rao |
Advertisement
Udayavani is now on Telegram. Click here to join our channel and stay updated with the latest news.