Advertisement

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ

02:12 PM Jul 06, 2022 | Team Udayavani |

ಸೇಡಂ: ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ತಮ್ಮಲ್ಲಿನ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದು, ಎಲ್ಲವನ್ನು ಕೂಲಂಕುಶವಾಗಿ ಪರಿಶೀಲಿಸಿ ತ್ವರಿತವಾಗಿ ಪರಿಹಾರ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್‌ ಹೇಳಿದರು.

Advertisement

ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆ ಅಹವಾಲನ್ನು ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾಲೂಕಿನ ಬೀರನಹಳ್ಳಿಯಲ್ಲಿ ಸರಕಾರಿ ಗೈರಾಣಿ, ಗೋಮಾಳ ಭೂಮಿ ಅನ್ಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಬೇಕು ಎಂದರು.

ನಾಡೇಪಲ್ಲಿಯಲ್ಲಿ ಜಮೀನಿನ 60 ಟಿಪ್ಪಣಿ ನೀಡಿಲ್ಲ ಎಂದು ಮನವಿ ಮಾಡಿದ್ದರು. ಅದಕ್ಕೆ ಎರಡು ತಿಂಗಳಲ್ಲಿ ಆ ಎಲ್ಲ ಟಿಪ್ಪಣಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕದಲಾಪುರದ 70ಕ್ಕೂ ಹೆಚ್ಚು ಮನೆಗಳ ಹಕ್ಕು ಪತ್ರ ನೀಡುವಂತೆ ತಿಳಿಸಿದ್ದೇನೆ. ವಾಸವಾದತ್ತ ಕಾರ್ಖಾನೆಯ ಗಣಿ ಪ್ರದೇಶಕ್ಕೆ ಅಂಟಿಕೊಂಡಿರುವ ಇಂಜೇಪಲ್ಲಿ ಸಮಸ್ಯೆಯನ್ನು ಒಂದು ತಿಂಗಳಲ್ಲಿ ಬಗೆಹರಿಸಲಾಗುವುದು. ಇದಕ್ಕೆ ಕೆಲವರು ವಿನಾಕಾರಣ ಅಲ್ಲಿನ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕಾರ್ಖಾನೆಗೆ ತೆರಳುವ ಗೂಡ್ಸ್‌ ರೈಲುಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಅದಕ್ಕೆ ಸಮಯ ನಿಗದಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು. ಮಳಖೇಡ ರಾಜಶ್ರೀ ಸಿಮೆಂಟ್‌ ಉತ್ಪಾದನಾ ಘಟಕದ ಅಧೀ ನದಲ್ಲಿರುವ ಶಾಲೆ ಸಮೀಪದಲ್ಲಿ ಅಡುಗೆ ಅನಿಲದ ಗೊಡೌನ್‌ ಇದ್ದು, ಅದನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗುವುದು. ಶಾಲೆಗಳಲ್ಲಿ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಬಗ್ಗೆ ದೂರು ಬಂದಿದ್ದು, ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಸಹಾಯಕ ಆಯುಕ್ತ ಎಂ.ಕಾರ್ತಿಕ್‌, ತಹಶೀಲ್ದಾರ್‌ ಬಸವರಾಜ ಬೆಣ್ಣೆಶಿರೂರ, ಸಹಾಯಕ ಕೃಷಿ ನಿರ್ದೇಶಕ ವೈ.ಎಲ್‌ ಹಂಪಣ್ಣ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Advertisement

ಕೆಲವರು ಗೊಬ್ಬರ, ಬೀಜದ ಕೊರತೆ ಇದೆ ಎಂದು ಹೇಳುತ್ತಿದ್ದಾರೆ. ರೈತರು ಈ ಬಗ್ಗೆ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಬಳಿ 100 ಮೆಟ್ರಿಕ್‌ ಟನ್‌ ಗೊಬ್ಬರ ಲಭ್ಯವಿದೆ. ಬೀಜ ಮತ್ತು ಗೊಬ್ಬರದ ಯಾವುದೇ ಕೊರತೆ ನಮ್ಮಲ್ಲಿಲ್ಲ. ಸೇಡಂ ತಾಲೂಕಿನ ಕೋಡ್ಲಾ ಮತ್ತು ಖಂಡೇರಾಯನಪಲ್ಲಿಯಲ್ಲಿ ಗೊಬ್ಬರ ಸಮರ್ಪಕವಾಗಿ ವಿತರಣೆ ಮಾಡುತ್ತಿಲ್ಲ ಎಂಬ ದೂರಿನ ಮೇರೆಗೆ ಅಲ್ಲಿನ ಖಾಸಗಿ ಏಜೆನ್ಸಿಗಳ ಪರವಾನಗಿ ರದ್ದು ಮಾಡಲಾಗಿದೆ. -ಯಶವಂತ ಗುರುಕರ್‌, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next