Advertisement

ಶರಣ ಗ್ರಾಮಕ್ಕೆ ಶೀಘ್ರ ಟೆಂಡರ್‌

11:55 AM Sep 08, 2017 | Team Udayavani |

ಧಾರವಾಡ: ಕೂಡಲಸಂಗಮ ಅಭಿವೃದ್ಧಿ ಪ್ರಾ ಧಿಕಾರ 140 ಕೋಟಿ ರೂ. ವೆಚ್ಚದಲ್ಲಿ “ಶರಣ ಗ್ರಾಮ’ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದು, ಕಳೆದ ವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

Advertisement

ಶೀಘ್ರ ಟೆಂಡರ್‌ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಧಿಕಾರದ ವಿಶೇಷಾಧಿಕಾರಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ ಹೇಳಿದರು. ಇಲ್ಲಿನ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದರ್ಶನ ಪಡೆದ ಬಳಿಕ ಅವರು ಈ ಮಾಹಿತಿ ನೀಡಿದರು.

ಕೂಡಲಸಂಗಮದ ಹತ್ತಿರ ಶರಣರ ದಾಸೋಹ, ಕಾಯಕ, ಸಮಾನತೆ ಹಾಗೂ ಅನುಭವ ಮಂಟಪದ ಪರಿಕಲ್ಪನೆಗಳಿಂದ ಕೂಡಿದ ಶರಣ ಗ್ರಾಮ ನಿರ್ಮಾಣಕ್ಕೆ ಯೋಜನೆ ರೂಪುಗೊಂಡಿದೆ. ಇದರಲ್ಲಿ ಸೇರಿಸಬೇಕಾದ ಅಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಧಾರವಾಡದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಇಲ್ಲಿನ 63 ಪುರಾತನರ ಮಂಟಪಗಳನ್ನು ವೀಕ್ಷಿಸಲಾಯಿತು ಎಂದರು. 

ಉದ್ದೇಶಿತ “ಶರಣ’ ಗ್ರಾಮದಲ್ಲಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ, ಭಕ್ತರ ಅನುಕೂಲಕ್ಕಾಗಿ ಯಾತ್ರಿ ನಿವಾಸ, ಕೃಷ್ಣಾ ಹಾಗೂ ಘಟಪ್ರಭಾ ನದಿಗಳ ಸಂಗಮ ಸ್ಥಳವಾದ ಬೀಳಗಿ ತಾಲೂಕಿನ ಚಿಕ್ಕಸಂಗಮದಲ್ಲೂ 108 ಶರಣರ ಹಾಗೂ 12ನೇ ಶತಮಾನದ ವಚನ ಚಳವಳಿ ನಂತರ ಅಲ್ಲಲ್ಲಿ ಚದುರಿ ಹೋದ ಶರಣರ ಕುರಿತ ಸಮಗ್ರ ಮಾಹಿತಿ ಒದಗಿಸುವ ಕೇಂದ್ರ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು. ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ ಈ ಸಂದರ್ಭದಲ್ಲಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next