Advertisement

ಪಕ್ಷೇತರರಿಗೆ ಕೂಡಲೇ ಖಾತೆ ಕೊಡಿ, ಶಿಕ್ಷಣ ಸಚಿವರನ್ನು ನೇಮಿಸಿ: ವಿಶ್ವನಾಥ್

11:42 AM Jun 19, 2019 | Nagendra Trasi |

ಬೆಂಗಳೂರು:ಪಕ್ಷೇತರರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈವರೆಗೂ ಖಾತೆ ಹಂಚಿಕೆ ಮಾಡದ ಬಗ್ಗೆ ಜೆಡಿಎಸ್ ಹಿರಿಯ ಮುಖಂಡ ಎಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ದಲಿತರಿಗೆ, ಹಿಂದುಳಿದವರಿಗೆ ಅವಮಾನ ಮಾಡಬೇಡಿ. ಸಚಿವ ಸ್ಥಾನ ನೀಡಿ ಎಷ್ಟು ದಿನ ಆಯಿತು. ಆದರೆ ಖಾತೆ ಯಾಕೆ ಇನ್ನೂ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು. ಪ್ರಮುಖವಾಗಿ ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪುಸ್ತಕ ಸೇರಿದಂತೆ ಹತ್ತಾರು ಸಮಸ್ಯೆ ಗಳಿವೆ. ಮಹೇಶ್ ರಾಜೀನಾಮೆ ಕೊಟ್ಟ ನಂತರ ಇಲಾಖೆಗೆ ಮುಖ್ಯಸ್ಥರೇ ಇಲ್ಲದಂತಾಗಿದೆ. ಈ ಇಲಾಖೆಗೆ ತುರ್ತಾಗಿ ಒಬ್ಬ ಸಚಿವರು ಬೇಕಾಗಿದ್ದಾರೆ ಎಂದರು.

ಮುಖ್ಯಮಂತ್ರಿ ಬಳಿ ಅಬಕಾರಿ ಸೇರಿದಂತೆ ಹಲವು ಖಾತೆಗಳಿವೆ. ಕೆಲವನ್ನು ಬೇರೆಯವರಿಗೆ ಹಂಚಿಕೆ ಮಾಡಲಿ ಎಂದ ವಿಶ್ವನಾಥ್ ಅವರು, ಫಾರುಕ್ ಗೆ ಸಚಿವ ಸ್ಥಾನ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಪ ಸಂಖ್ಯಾತರಿಗೆ ಅವಕಾಶ ನೀಡಲೇ ಬೇಕಿತ್ತು. ಫಾರುಕ್ ಗೆ ಸ್ಥಾನ ಕೊಟ್ಟಿದ್ರೆ, ಒಬ್ಬ ಅಲ್ಪ ಸಂಖ್ಯಾತ, ಒಬ್ಬ  ಹಿಂದುಳಿದ ವರ್ಗ, ಒಬ್ಬ ದಲಿತ ರಿಗೆ ಅವಕಾಶ ಕೊಟ್ಟಂತೆ ಆಗ್ತಿತ್ತು. ಜೆಡಿಎಸ್ ಒಂದು ಜಾತ್ಯಾತೀತ ಪಕ್ಷ. ಎಲ್ಲ  ವರ್ಗಕ್ಕೂ ಅವಕಾಶ ನೀಡಬೇಕಿತ್ತು ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next