Advertisement

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

12:24 AM Sep 28, 2023 | Team Udayavani |

ಬಂಟ್ವಾಳ: ಕೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement

ನೆಲ್ಯಾಡಿಯ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಇಬ್ರಾಹಿಂ ಬಂಧಿತ ಆರೋಪಿಯಾಗಿದ್ದು, ಈತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. 2004ರಲ್ಲಿ ಕೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಅವರಲ್ಲಿ ಓರ್ವ ಆರೋಪಿ ಶರಣಾಗತನಾಗಿದ್ದನು.

ಆದರೆ ಇಬ್ರಾಹಿಂ ತಲೆಮರೆಸಿಕೊಂಡಿದ್ದು, ಇದೀಗ ಬಂಟ್ವಾಳ ನಗರ ಠಾಣಾ ಪೊಲೀಸ್‌ ಇನ್‌ಸ್ಪೆಕ್ಟರ್‌ ಆನಂತಪದ್ಮನಾಭ ಮತ್ತು ಪಿಎಸ್‌ಐ ರಾಮಕೃಷ್ಣ ಅವರ ಮಾರ್ಗದರ್ಶನದಂತೆ ಸಿಬಂದಿ ಗಣೇಶ್‌ ಮತ್ತು ಗೋಪಾಲಕೃಷ್ಣ ಆರೋಪಿಯನ್ನು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next