Advertisement
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, “ತಜ್ಞರ ಶಿಫಾರಸುಗಳ ಆಧಾರದ ಮೇಲೆ, ನಾವು ಈಗಾಗಲೇ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಔಷಧಿಗಳನ್ನು ಸಂಗ್ರಹಿಸುವುದರ ಜೊತೆಗೆ ಮಕ್ಕಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ವೈದ್ಯರಿಗೆ ತರಬೇತಿ ನೀಡುತ್ತಿದ್ದು, ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಕೋವಿಡ್ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. ಕರ್ನಾಟಕದಲ್ಲಿ ನಿಯಂತ್ರಣದಲ್ಲಿರುವದಕ್ಕೆ ಕಾರಣ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ಎಲ್ಲ ಸಚಿವರು ತಂಡವಾಗಿ ಕಾರ್ಯನಿರ್ವಹಿಸುತ್ತಿರುವದು. ನಾವು ಈಗಾಗಲೇ ಗಡಿ ಪ್ರದೇಶಗಳಲ್ಲಿ ಚೆಕ್-ಪೋಸ್ಟ್ ಗಳನ್ನು ಸ್ಥಾಪಿಸಿದ್ದೇವೆ ಮತ್ತು ಗಡಿ ತಪಾಸಣೆಯನ್ನು ಇನ್ನಷ್ಟು ತೀವ್ರಗೊಳಿಸುವ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇವೆ” ಎಂದು ಹೇಳಿದರು.
Related Articles
Advertisement
ಸವಿತಾ ಸಮಾಜ ಸದಸ್ಯರಿಗೆ ಆಹಾರ ಕಿಟ್‍ಗಳನ್ನು ವಿತರಣೆ:ಕಂದಾಯ ಸಚಿವ ಆರ್ ಅಶೋಕ ಅವರು ಸವಿತಾ ಸಮಾಜದ ಸದಸ್ಯರಿಗೆ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ನಮ್ಮ ಸಮಾಜದಲ್ಲಿ ಸವಿತಾ ಸಮಾಜವು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಈ ಸಮುದಾಯವು ಕೋವಿಡ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ತತ್ತರಿಸಿದೆ ಎಂದು ನನಗೆ ತಿಳಿದಿದೆ. ಆದ್ದರಿಂದ, ನಾನು ಮತ್ತು ನನ್ನ ತಂಡ ಯಾವಾಗಲೂ ನಿಮ್ಮ ಜೊತೆಯಾಗಿರುತ್ತೇವೆ ಎಂದು ಭರವಸೆ ನೀಡಲು ನಾನು ಬಯಸುತ್ತೇನೆ. ನಾವು ವಿವಿಧ ಸಮುದಾಯಗಳು ಮತ್ತು ಕ್ಷೇತ್ರಗಳಿಗೆ ಕಿಟ್‍ಗಳನ್ನು ಒದಗಿಸುತ್ತಿದ್ದೇವೆ. ನಿಮ್ಮೆಲ್ಲರ ಆಶೀರ್ವಾದಗಳನ್ನು ನಾನು ಬಯಸುತ್ತೇನೆ” ಎಂದರು ಕರ್ನಾಟಕ ಸವಿತ ಸಮಾಜ ಅಭಿವೃದ್ಧಿ ಮಂಡಳಿ ಅಧ್ಯಕ್ಷ ನರೇಶ್ ಕುಮಾರ್, ಬಿಜೆಪಿ ಮಂಡಲ್ ಅಧ್ಯಕ್ಷ ರವಿ ಮತ್ತು ಪಕ್ಷದ ಮುಖಂಡರಾದ ಲಕ್ಷ್ಮೀಕಾಂತ್, ಕಬ್ಬಾಲು ಉಮೇಶ್ ಮತ್ತು ಬಸವರಾಜು ಉಪಸ್ಥಿತರಿದ್ದರು.