Advertisement
ಈ ವೇಳೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಮಾತನಾಡಿದ ಸಚಿವರು ಕೋವಿಡ್ ನ ಎಲ್ಲಾ ನಿಯಮಗಳನ್ನ ಪಾಲಿಸುವಂತೆ ಸೂಚಿಸಿದರು. ಹಾಗೆಯೇ ಆತ್ಮಸ್ಥೈರ್ಯ ತುಂಬುವ ಮಾತುಗಳನ್ನಾಡಿದ ಅವರು,”ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸುರಕ್ಷಿತ ವಾತಾವರಣ ಸೃಷ್ಟಿಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡೆ ಶಾಲೆಗಳನ್ನು ತೆರೆದಿದೆ. ಎಲ್ಲರೂ ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಿದ್ದಾರೆಯೇ ಎನ್ನುವದನ್ನು ಖಚಿತಪಡಿಸಿಕೊಳ್ಳಲು ಶಾಲೆಗಳಿಗೆ ಭೇಟಿ ನೀಡಲಾಗುತ್ತಿದೆ. ಇದರ ಸಾಧಕ ಬಾಧಕಗಳ ಮೇಲೆ ಉಳಿದ ತರಗತಿಗಳನ್ನ ಆರಂಭಿಸುವ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು”, ಎಂದು ತಿಳಿಸಿದರು.
ಆರ್ ಅಶೋಕ ಅವರು ರಾಘವೇಂದ್ರ ಸ್ವಾಮಿಗಳ 350 ನೇ ಪೂರ್ವಾರಾಧನೆಯ ನಿಮಿತ್ತ ದೇವಗಿರಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ನಾಡಿನ ಜನರ ಆರೋಗ್ಯಕ್ಕಾಗಿ ಗುರು ರಾಯರ ಬಳಿ ಪ್ರಾರ್ಥಿಸಿದರು.