ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಡಿಸಿ, ಎಸ್ಪಿಗಳ ನೇತೃತ್ವದಲ್ಲಿ ರಕ್ಷಣೆ ನೀಡಿ ವಾಹನ ಓಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಮುಖ್ಯಮಂತ್ರಿ ಮನೆಯಲ್ಲಿ ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೋ ಒಬ್ಬ ವ್ಯಕ್ತಿಯ ಹಿತಕ್ಕಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚವರೊಂದಿಗೆ ಚರ್ಚಿಸಲಾಗಿದ್ದು ಪ್ರತಿ ಬಸ್ ಗೂ ಇಬ್ಬರು ಪೊಲೀಸ್ ಅಧಿಕಾರಿಗಳ ರಕ್ಷಣೆ ನೀಡಲಾಗುವುದು. ಬಸ್ ಸಂಚಾರಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ರಹಸ್ಯ ಲ್ಯಾಬ್‌ನಲ್ಲಿ ಡ್ರಗ್ಸ್ ತಯಾರಿಸುತ್ತಿದ್ದ ರಸಾಯನಶಾಸ್ತ್ರಜ್ಞ ವಶಕ್ಕೆ
ಕೋಡಿಹಳ್ಳಿ ಚಂದ್ರಶೇಖರ್ ಗೆ ಕಾರ್ಮಿಕ ಕಾಯ್ದೆಯ ಬಗ್ಗೆ ಮಾಹಿತಿಯೇ ಇಲ್ಲ. ಅವರಿಗೂ ಸಾರಿಗೆ ನೌಕರರ ಪ್ರತಿಭಟನೆಗೂ ಸಂಬಂಧವಿಲ್ಲ. ಕೊರೊನಾ ಸಂದರ್ಭದಲ್ಲಿ ನೌಕರರ ದಾರಿ ತಪ್ಪಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಕೋಡಿಹಳ್ಳಿ ಚಂದ್ರಶೇಖರ ಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಹೇಳಿದರು.