ಬೆಳ್ತಂಗಡಿ: ಬೆಳ್ತಂಗಡಿ ಸಂತಕೆಟ್ಟೆ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ಶುಕ್ರವಾರ ತಾಲೂಕಿನ ಅರ್ಹ ಫಲಾನುಭವಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ 94ಸಿ ಹಕ್ಕು ಪತ್ರ ವಿತರಿಸಿದರು.
ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಶಾಸಕ ಹರೀಶ್ ಪೂಂಜ ಆಶಯ ಭಾಷಣ ಮಾಡಿದರು.
ಕೊಕ್ಕಡ ಹೋಬಳಿಯ 19, ಬೆಳ್ತಂಗಡಿ ಹೋಬಳಿಯ 23, ವೇಣೂರು ಹೋಬಳಿಯ 15 ಮಂದಿ ಫಲಾನುಭವಿಗಳಿಗೆ ಹಕಗಕುಪತ್ರ ವಿತರಿಸಲಾಯಿತು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ.ಶೆಟ್ಟಿ, ಸದಸ್ಯರಾದ ಕೊರಗಪ್ಪ ನಾಯ್ಕ್, ಸೌಮ್ಯಲತಾ ಜಯಂತ್ ಗೌಡ, ತಾ.ಪಂ.ಉಪಾಧ್ಯಕ್ಷೆ ವೇದಾವತಿ, ಸದಸ್ಯರಾದ ಸುಧೀರ್ ಸುವರ್ಣ, ಕೃಷ್ಣಯ್ಯ ಆಚಾರ್ಯ, ಅಮಿತಾ, ಸುಶೀಲಾ, ವಸಂತಿ ಲಕ್ಷ್ಮಣ್, ನ.ಪಂ.ಅಧ್ಯಕ್ಷೆ ರಜನಿ ಕುಡ್ವ, ದ.ಕ. ಜಿಲ್ಲಾ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ತಹಶೀಲ್ದಾರ್ ಮಹೇಶ್ ಜೆ. ಉಪಸ್ಥಿತರಿದ್ದರು.
ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಸ್ವಾಗತಿಸಿದರು.
ಬಳಿಕ ಸಚಿವರು ತಾಲೂಕು ಆಡಳಿತಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರಲ್ಲದೆ, ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.