Advertisement

15-20 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ : ಆರ್‌ ಅಶೋಕ್‌

08:20 PM Mar 02, 2022 | Team Udayavani |

ಬೆಂಗಳೂರು : ಸುಮಾರು 15-20 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡಿ ಜನತೆಗೆ ಅನುಕೂಲ ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌ ಪ್ರಾರಂಭಿಸಲಿದ್ದಾರೆ.

Advertisement

ಈ ಕುರಿತು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಕಡತಗಳು ಕೇವಲ ಕಾಗದ ಅಲ್ಲ. ಅದರಲ್ಲಿ ಜನರ ಹಿತ, ಭಾವನೆ ಅಡಕವಾಗಿದೆ ಎನ್ನುವುದು ನನ್ನ ಅಭಿಪ್ರಾಯ. ನಾನಾ ಕಾರಣಗಳಿಂದ ಇತ್ಯರ್ಥ ಆಗದೆ ಇದ್ದ ಹಳೆಯ ಕಡತಗಳನ್ನು 10 ದಿನಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ತೀರ್ಮಾನ ಮಾಡಬೇಕು. ಜನರ ಅಲೆದಾಟ ತಪ್ಪಿಸಬೇಕು. ಪ್ರಾಯೋಗಿಕವಾಗಿ ಗುರುವಾರ ಮೈಸೂರಿನಲ್ಲಿ ಪ್ರಾರಂಭಿಸುತ್ತಿದ್ದೇನೆ. ನಂತರ ರಾಜ್ಯಾದ್ಯಂತ ಈ ಅಭಿಯಾನವನ್ನು ಕಂದಾಯ ಇಲಾಖೆ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿಯೂ ಕಡತಗಳ ಸಮಸ್ಯೆ ಅರಿವಾಗಿತ್ತು. ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ಈ ಅಭಿಯಾನ ನಡೆಯಲಿದೆ. ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಇದರ ನೇತೃತ್ವ ವಹಿಸಲಿದ್ದಾರೆ. ಕಂದಾಯ ಇಲಾಖೆ ಎಲ್ಲ ಅಧಿಕಾರಿಗಳು ಈ ಅಭಿಯಾನದಲ್ಲಿ ಕೆಲಸ ಮಾಡುತ್ತಾರೆ. ಕಂದಾಯ ಇಲಾಖೆಗೆ ಹೊಸ ದಿಕ್ಕನ್ನು ನೀಡಬೇಕು. ಕಂದಾಯ ಇಲಾಖೆ ಜನಸ್ನೇಹಿ ಇಲಾಖೆ ಆಗಿರಬೇಕು ಎನ್ನುವುದು ನನ್ನ ಆಶಯ ಎಂದು ಅಶೋಕ್‌ ಹೇಳಿದರು.

ಇದನ್ನೂ ಓದಿ : ಉಕ್ರೇನ್‌ ನಿಂದ ಬೆಂಗಳೂರಿಗೆ ಸುರಕ್ಷಿತವಾಗಿ ತಲುಪಿದ ಚಾಮರಾಜನಗರದ ವಿದ್ಯಾರ್ಥಿ ಸಿದ್ಧೇಶ್

 

Advertisement
Advertisement

Udayavani is now on Telegram. Click here to join our channel and stay updated with the latest news.

Next