ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿಯ ಬಗ್ಗೆ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆರ್.ಅಶೋಕ್, ಈ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬೆಂಗಳೂರು ನಗರ ಉಸ್ತುವಾರಿ ವಿಚಾರಕ್ಕೆ ಇಂದು ನಮ್ಮ ಹಿರಿಯ ಸಚಿವ ಸೋಮಣ್ಣ ಮಾತನಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ನೇಮಕ ಮಾಡುವುದು ಸಿಎಂ ಬೊಮ್ಮಾಯಿಯವರ ವಿವೇಚನೆಗೆ ಬಿಟ್ಟಿದ್ದು ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನಿಡುವುದಿಲ್ಲ ಎಂದರು.
ಇದನ್ನೂ ಓದಿ:ಬೆಂಗಳೂರು ನಗರ ಉಸ್ತುವಾರಿಗಾಗಿ ಸಚಿವ ವಿ. ಸೋಮಣ್ಣ ಪಟ್ಟು
ಈತನಕ ನಾನು ಇದೇ ಜಿಲ್ಲೆಯ ಉಸ್ತುವಾರಿ ಬೇಕೆಂದು ಸಿಎಂ ಸೇರಿದಂತೆ ಯಾರ ಹತ್ತಿರವೂ ನಾನು ಕೇಳಿಲ್ಲ. ಈ ಹಿಂದೆ ಬೆ, ಗ್ರಾಮಾಂತರ ಉಸ್ತುವಾರಿ ಕೊಟ್ಟಿದ್ದರು, ಆಗಲೂ ಕೆಲಸ ಮಾಡಿದ್ದೇನೆ. ನಂತರ ಎಂ.ಟಿ.ಬಿ ನಾಗರಾಜ್ ನನಗೆ ಬೇಕು ಅಂತ ಕೇಳಿದರು ಹಾಗಾಗಿ ಅವರಿಗೆ ಬಿಟ್ಟುಕೊಟ್ಟೆ. ಉಸ್ತುವಾರಿ ಮಂತ್ರಿ ಆಗದೆ ಕೂಡ ಕೆಲಸ ಮಾಡಿದ್ದೇನೆ ಎಂದು ಅಶೋಕ್ ಹೇಳಿದರು.
ಬೆಂಗಳೂರು ನಗರ ಉಸ್ತುವಾರಿ ವಿಚಾರದಲ್ಲಿ ಅಂತಿಮವಾಗಿ ಸಿಎಂ ಬೊಮ್ಮಾಯಿಯರ ನಿರ್ಧಾರಕ್ಕೆ ನಾನು ಬದ್ದ. ಬೆಂಗಳೂರು ಉಸ್ತುವಾರಿ ಯಾರಿಗೆ ಕೊಟ್ಟರೂ ಅವರ ಜೊತೆಗೆ ಕೆಲಸ ಮಾಡುತ್ತೇನೆ ಎಂದು ಸಚಿವ ಆರ್ ಅಶೋಕ್ ಹೇಳಿದರು.