ಬೆಂಗಳೂರು: ಮುಂದಿನ ದಿನಗಳಲ್ಲಿ ಎದುರಾಗುವ ಉಪಚುನಾವಣೆ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದಕ್ಕೂ ಮೊದಲು ಪಕ್ಷದ ಇಮೇಜ್ ಹೆಚ್ಚಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಶಾಸಕರ ಜೊತೆ ವೈಯಕ್ತಿಕವಾಗಿ ಚರ್ಚೆ ನಡೆಸಲಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಹಿತಿ ನೀಡಿದರು. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಸಭೆ ಮಾಡಿದ್ದೆವು. ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ಮಾಡಿದ್ದೇವೆ. ಮುಂದಿನ ಉಪಚುನಾವಣೆ (ಸಿಂದಗಿ) ಬಗ್ಗೆ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆ ವೇಳೆ ಪ್ರಚಾರದ ರೀತಿಯಲ್ಲಿ ತಾ.ಪಂ ಮತ್ತು ಜಿ.ಪಂ ಚುನಾವಣೆ ಗೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.
ಇದನ್ನೂ ಓದಿ:ಮೈಸೂರಿನ ಐಎಎಸ್ ಅಧಿಕಾರಿಗಳ ಸಂಘರ್ಷ ನನ್ನ ಕೈ ಮೀರಿದೆ: ಅಸಹಾಯಕತೆ ತೋರಿದ ಸಚಿವ ಸೋಮಶೇಖರ್
ಚುನಾವಣೆ ಬಗ್ಗೆ ಎಲ್ಲಾ ಶಾಸಕರು ಮತ್ತು ಸಚಿವರ ಜೊತೆಗೆ ಚರ್ಚೆ ಮಾಡಲು ತಿರ್ಮಾನ ಮಾಡಿದ್ದೇವೆ. ಪಕ್ಷ ಸಂಘಟನೆಯ ಬಗ್ಗೆ ಸಮಾಲೋಚನೆ ಮಾಡಿದ್ದೇವೆ. ಶಾಸಕಾಂಗ ಸಭೆ ಕರೆಯುವ ಬಗ್ಗೆ ಚರ್ಚೆ ಮಾಡಿಲ್ಲ. ಆದರೆ ಶಾಸಕರ ಜೊತೆಗೆ ವೈಯಕ್ತಿಕವಾಗಿ ಚರ್ಚೆ ಮಾಡುವ ಬಗ್ಗೆ ಮಾತ್ರ ಇಂದು ಚರ್ಚೆಯಾಗಿದೆ ಎಂದು ಅಶೋಕ್ ಹೇಳಿದರು.
ಅನಾಥ ಶವಗಳ ಅಸ್ಥಿ ವಿಸರ್ಜನೆ ಮಾಡಿದ ಬೆನ್ನಲ್ಲೇ ತಿಥಿ ಮಾಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಚರ್ಚೆ ಮುಂದುವರಿದಿದೆ. ಕೊಡಗು – ಕೇರಳ ಗಡಿ ಭಾಗದಲ್ಲಿ ಒಂದು ನಿರ್ದಿಷ್ಟ ಜಾಗ ಗುರುತಿಸಿದ್ದೇವೆ ಶೀಘ್ರದಲ್ಲೇ ಈ ಕುರಿತು ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ: ‘ಕೇರ್’ ಇಲ್ಲದ ಸೆಂಟರ್: ಅವ್ಯವಸ್ಥೆಯ ಆಗರವಾದ ಸಿಎಂ ತವರು ಜಿಲ್ಲೆಯ ಕೋವಿಡ್ ಕೇರ್ ಸೆಂಟರ್