Advertisement
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 25 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಜಾತ್ಯತೀತ ಪಕ್ಷವಾಗಿ ಸಾಮಾಜಿಕ ನ್ಯಾಯ ಒದಗಿಸುವ ಕಾರ್ಯ ಟಿಕೆಟ್ ಹಂಚಿಕೆಯಲ್ಲಿ ಮಾಡಿದ್ದೇವೆ. ಬಿಜೆಪಿ ತೋರಿಕೆಗೆ ಸಬ್ ಕಾ ಸಾಥ್-ಸಬ್ ಕಾ ವಿಕಾಸ ಎನ್ನುತ್ತಿದೆ ಎಂದರು.
Related Articles
Advertisement
ಎಲ್ಲ ಜಿಲ್ಲೆಯಲ್ಲೂ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾನ ಮಾಡುವುದರಿಂದ ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗೆ ಹೆಚ್ಚು ನೀಡುತ್ತ ಬಂದಿದೆ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮೊದಲು ಜಾರಿಗೆ ತಂದಿದ್ದು ಕಾಂಗ್ರೆಸ್. ಎಂ. ವೀರಪ್ಪ ಮೊಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನ ಮಾಡಿದ್ದರು. ಈಗ ಚುನಾವಣೆಗೆ ಅಭ್ಯರ್ಥಿ ಘೋಷಣೆಯಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದರು.
ಕಾಂಗ್ರೆಸ್‌ನಲ್ಲೇ ಇದ್ದವರು:
ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಸಂಘ ಪರಿವಾರದೊಂದಿಗೆ ಗುರುತಿಸಿಕೊಂಡಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಭಂಡಾರಿ ಅವರು ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದುಕೊಂಡು ಅನೇಕ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದರು.
ಭಿನ್ನಾಭಿಪ್ರಾಯ ಇಲ್ಲ:
ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ನಲ್ಲೇ ಇದ್ದಾರೆ. ಇತ್ತೀಚೆಗೆ ನಡೆದ ಸದಸ್ಯತ್ವ ನೋಂದಣಿ ಸಭೆಯಲ್ಲೂ ಪಾಲ್ಗೊಂಡಿದ್ದರು. ಹಾನಗಲ್ ಉಪಚುನಾವಣೆಯ ನೇತೃತ್ವ ವಹಿಸಿ 15 ದಿನ ನಿರಂತರ ಪ್ರಚಾರ ಮಾಡಿ ದ್ದರು. ಅವರಲ್ಲಿ ಕಾಂಗ್ರೆಸ್ ಬಗ್ಗೆ ಸಣ್ಣ ಬಿನ್ನಾಭಿಪ್ರಾಯವೂ ಇಲ್ಲ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ದಕ್ಷಿಣ ಕನ್ನಡ, ಉಡುಪಿ ಕಾಂಗ್ರೆಸ್ ಪಕ್ಷಕ್ಕೆ ಕೇಡರ್ ಬೇಸ್ ಇದ್ದಂತೆ. ಯಾವುದೇ ವಿಚಾರದಲ್ಲೂ ಗೊಂದಲ, ವಿವಾದ ಇಲ್ಲ.– ಧ್ರುವನಾರಾಯಣ, ಕೆಪಿಸಿಸಿ ಕಾರ್ಯಾಧ್ಯಕ್ಷ