Advertisement
ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರಕ್ಕಿಳಿದ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಈ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್, ಎಚ್.ಡಿ.ಕುಮಾರಸ್ವಾಮಿ ಆಟ ನಡೆಯಲ್ಲ ಎಂದು”ಟಾಂಗ್’ ನೀಡಿದರು.
Related Articles
Advertisement
ಎಚ.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಅವರಿಂದ ಕ್ಷೇತ್ರದ ಜನರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಸಮರ್ಥರಿದ್ದಾರೆ. ಆಡಳಿತ ಪಕ್ಷದ ಅಭ್ಯರ್ಥಿಗೆ ಮತ ಹಾಕುವುದರಿಂದ ಕ್ಷೇತ್ರಕ್ಕೆ ಒಳ್ಳೆಯದಾಗುತ್ತದೆ. ಈ ವಿಚಾರ ಕ್ಷೇತ್ರದ ಜನರಿಗೆ ತುಂಬಾ ಚೆನ್ನಾಗಿ ಗೊತ್ತಿದೆ ಎಂದರು.
ಎಚ್.ಡಿ. ಕುಮಾರಸ್ವಾಮಿ ಇರಬಹುದು, ಡಿ.ಕೆ. ಶಿವಕುಮಾರ್, ಡಿ.ಕೆ.ಸುರೇಶ್ ಇರಬಹುದು ಬಂದು ಹೋಗಬಹುದು. ಆದರೆ ಈ ಕ್ಷೇತ್ರದಲ್ಲಿ ಏನು ಮಾಡಲು ಸಾಧ್ಯ ಅವರಿಂದ. ದಿನ ಬೆಳಗಾದರೆ ಜನರ ಜತೆ ನಿಂತು ಕೆಲಸ ಮಾಡುವ ಸಮರ್ಥ ಪ್ರತಿನಿಧಿ ಬೇಕು ಎಂದು ಹೇಳಿದರು.
ಜೆಡಿಎಸ್-ಬಿಜೆಪಿಗೆ ಹೋರಾಟ: ಅಶೋಕ್
ಪಾಲಿಕೆಯ ಮಾಜಿ ಸದಸ್ಯ ಸೇರಿ ಹಲವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಿಕೊಂಡು ಮುನಿರತ್ನ ಪರ ಪ್ರಚಾರ ನಡೆಸಿದ ಕಂದಾಯ ಸಚಿವ ಆರ್.ಅಶೋಕ್, ಈ ಕ್ಷೇತ್ರದಲ್ಲಿ ನಮಗೂ ಜೆಡಿಎಸ್‌ಗೆ ನೇರ ಹೋರಾಟದ ಸ್ಥಿತಿ ಬರಬಹುದು. ಏಕೆಂದರೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರುವವರು ಪಟ್ಟಿ ದೊಡ್ಡದಿದೆ. ನಾವು ಚುನಾವಣೆ ಗೆಲ್ಲಲೇಬೇಕು ಎಂದು ಶತ ಪ್ರಯತ್ನ ಮಾಡುತ್ತೇವೆ. ಅಭಿವೃದ್ಧಿಗಾಗಿ ಮñ ಕೇಳುತ್ತೇವೆ ಎಂದು ಹೇಳಿದರು. ಕಾಂಗ್ರೆಸ್‌ನವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ್ದಕ್ಕೆ ಎಫ್ಐಆರ್ ದಾಖಲಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ, ಇವರಿಗಾಗಿ ಸಂವಿಧಾನ ಬದಲಾಯಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಜನರಿಂದ ಉತ್ತರ ಸಿಗಲಿದೆ: ಡಿ.ಕೆ.ಶಿವಕುಮಾರ್
ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಕೆಪಿಸಿಸಿ ವಕ್ತಾರರು ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ವೀಕ್ಷಕರ ಸಭೆ ನಡೆಸಿದ ಡಿ.ಕೆ.ಶಿವಕುಮಾರ್,ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತಿದೆ.ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಿದೆ. ನಾವುಕೊಟ್ಟ ಮತವನ್ನು ಮಾರಿಕೊಳ್ಳಲಾಗಿದೆ ಎಂದು ಜನರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದರು. ತಾವು ಹಿಂದೆ ಚಲಾಯಿಸಿದ ಮತಗಳಿಂದ ಗೆದ್ದ ಅಭ್ಯರ್ಥಿ ತನ್ನನ್ನು ಮಾರಾಟ ಮಾಡಿಕೊಂಡಿದ್ದಕ್ಕೆ ರಾಜರಾಜೇಶ್ವರಿ ಕ್ಷೇತ್ರದ ಮತದಾರರು ಕೋಪಗೊಂಡಿದ್ದಾರೆ. ಮುಂದಿನ ತಿಂಗಳು 3 ರಂದು ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ಸಂಸದ ಡಿ.ಕೆ ಸುರೇಶ್, ನಸೀರ್ ಅಹ್ಮದ್, ನಾರಾಯಣ ಸ್ವಾಮಿ, ಪುಷ್ಪಾ ಉಪಸ್ಥಿತರಿದ್ದರು.