Advertisement
ದಾವಣಗೆರೆಯಲ್ಲಿ ವಾಸ ಮಾಡದೇ ಇರುವಂತಹ ಸಚಿವ ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಮೂಲಕ ಬಿಜೆಪಿ ಮತ್ತೆ ಅಧಿಕಾರ ಪಡೆಯುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬಿಜೆಪಿ ಮುಖಂಡರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಪ್ರಸನ್ನಕುಮಾರ್ ಮನವಿಗೂ ಸ್ಪಂದಿಸದೆ ಪ್ರತಿಭಟನೆ ನಡೆಸಿದರು.
Related Articles
Advertisement
ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ,ಕಳೆದ ಬಾರಿ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ವಾಸ ಇರದೇ ಇದ್ದಂತಹವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ. ಈಗ ಸಚಿವ ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಬಿ. ಚಿದಾನಂದಗೌಡರ ಹೆಸರು ಸೇರಿಸಲಾಗಿದೆ. ಮುಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಂದು ಮತ ಚಲಾಯಿಸಿದರೂ ಅಚ್ಚರಿಪಡಬೇಕಿಲ್ಲ. ಟೂರಿಂಗ್ ಟಾಕೀಸ್ನಂತೆ ಆಗಿದೆ ಎಂದು ಟೀಕಿಸಿದರು. ಆಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಮಾಡಲಾಗಿದೆ. ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿರುವ ಎಲ್ಲ ಸದಸ್ಯರ ಹೆಸರು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ
ಸದಸ್ಯ ಕೆ. ಚಮನ್ ಸಾಬ್ ಮಾತನಾಡಿ, ವಿಧಾನ ಪರಿಷತ್ ಸದಸ್ಯರೇ ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸಲಿ. ಜನಪ್ರತಿನಿಧಿಗಳಾದರೂ ಯಾಕೆ ಬೇಕು ಎಂದು ಪ್ರಶ್ನಿಸಿದರು. ಸದಸ್ಯರಾದ ಜೆ.ಎನ್. ಶ್ರೀನಿವಾಸ್, ಜಿ.ಎಸ್. ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ್ ಇತರರು ಇದ್ದರು.