ದಾಂಡೇಲಿ: ತೀವ್ರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಆರ್.ವಿ.ದೇಶಪಾಂಡೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡು, ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು (ಜು.25) ಶಾಸಕರು ನಗರದ ಬೈಲುಪಾರು ಸೇತುವೆ ಹಾಗೂ ಪ್ರವಾಹದ ಸೆಳೆತಕ್ಕೆ ಕೊಚ್ಚಿ ಹೋಗಿರುವ ಬೈಲುಪಾರಿನಿಂದ ಐ.ಪಿ.ಎಂ ಹೋಗುವ ಸೇತುವೆ ವೀಕ್ಷಿಸಿದರು.
ನಗರ ಸಭಾ ಸದಸ್ಯೆ ವೆಂಕಟ್ರಮಣಮ್ಮ ಮೈಥುಕುರಿಯವರು ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಈ ಕುರಿತು ಸರಕಾರದ ಮೇಲೆ ಒತ್ತಡ ತರುವುದಾಗಿ ಶಾಸಕರು ತಿಳಿಸಿದರು.
ಪ್ರವಾಹದಿಂದ ಮುಳುಗಡೆಯಾಗಿದ್ದ ಕಾಳಿ ರಿವರ್ ಪಾರ್ಕ್ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಪಾರ್ಕ್ ನಿರ್ಮಾಣದ ಕಾಮಗಾರಿ ವಿಳಂಭವಾಗಿರುವುದಕ್ಕೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಲ್ಲಿ ಪ್ರಶ್ನಿಸಿದರು. ಕಾಮಗಾರಿ ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ, ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ, ತಹಶೀಲ್ದಾರ್ ಶೈಲೇಶ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಎನ್.ಹಂಚಿನಮನಿ, ಡಿವೈಎಸ್ಪಿ ಗಣೇಶ.ಕೆ.ಎಲ್, ಮಾಜಿ ಜಿಲ್ಲಾ ಪಂಚಾಯ್ತು ಅಧ್ಯಕ್ಷ ಕೃಷ್ಣ ಪಾಟೀಲ, ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ವಿ.ಆರ್.ಹೆಗಡೆ, ಹಳಿಯಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭಾಷ ಕೊರ್ವೇಕರ, ತಾಲೂಕು ಪಂಚಾಯ್ತು ಮಾಜಿ ಸದಸ್ಯ ಬಾಳು ಪಾಟೀಲ, ಕಾಂಗ್ರೆಸ್ ಮುಖಂಡರುಗಳಾದ ಮುನ್ನಾ ವಹಾಬ ಶೇಖ, ತಸ್ವರ ಸೌದಗಾರ, ಬಸೀರ್ ಗಿರಿಯಾಳ, ಅವಿನಾಶ ಘೋಡಕೆ ಹಾಗೂ ನಗರ ಸಭಾ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮೊದಲಾದವರು ಉಪಸ್ಥಿತರಿದ್ದರು.