Advertisement

National Highway ಕಾಮಗಾರಿ ಕಾಲಮಿತಿಯೊಳಗೆ ಮುಗಿಸಲು ಚೌಟ ಸೂಚನೆ

12:36 AM Jun 20, 2024 | Team Udayavani |

ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಕೇಂದ್ರ ಸರಕಾರದ ವಿವಿಧ ಯೋಜನೆ ಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀ ಲನೆ ನಡೆಸಿದ ಅವರು ಬಿ.ಸಿ. ರೋಡ್‌- ಅಡ್ಡಹೊಳೆ, ಸಾಣೂರು -ಬಿಕರ್ನಕಟ್ಟೆ, ಪೂಂಜಾಲಕಟ್ಟೆ- ಚಾರ್ಮಾಡಿ ಸೇರಿದಂತೆ ಹಲವು ಹೆದ್ದಾರಿ ಕಾಮಗಾರಿಗಳು ನಡೆಯು ತ್ತಿವೆ. ಇವು ಪೂರ್ಣಗೊಂಡರೆ ಜಿಲ್ಲೆಯ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪ್ರಗತಿ ಆಗಲಿದೆ ಎಂದರು.

ಜು. 5 ಗಡುವು ನಿಗದಿ
ಬಿ.ಸಿ.ರೋಡ್‌ – ಅಡ್ಡಹೊಳೆ ಕಾಮಗಾರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಾರ್ವಜನಿಕರ ತಾಳ್ಮೆ ಪರೀಕ್ಷೆ ಬೇಡ. ಹಲವು ತಿಂಗಳಿಂದ ಬಸ್‌, ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಪ್ರಾಧಿಕಾ ರವು ತನ್ನ ಸಂಪೂರ್ಣ ಸಾಮರ್ಥ್ಯ, ಮಾನವ ಸಂಪನ್ಮೂಲ ಹಾಗೂ ಯಂತ್ರೋ ಪ್ರಕರಣಗಳನ್ನು ಬಳಸಿ ಕಾಮಗಾರಿ ನಿರ್ವ ಹಿಸಬೇಕು. ಜುಲೈ 5ರ ಒಳಗೆ ಮೆಲ್ಕಾರ್‌, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಗಡುವು ನೀಡಿದರು.
ತಲಪಾಡಿ – ಕಾಸರಗೋಡುವರೆಗೆ ಚತುಷ್ಪಥ ಹೆದ್ದಾರಿಯನ್ನು ಸಮಸ್ಯೆಗಳಿಲ್ಲದೆ ಹೇಗೆ ನಿರ್ವಹಿಸಲಾಗುತ್ತಿದೆಯೋ ಆ ಮಾದರಿಯನ್ನೇ ಅನುಸರಿಸಿ ಎಂದರು.

ಕಾರ್ಕಳ – ಮೂಡುಬಿದಿರೆ- ಮಂಗ ಳೂರು ಹೆದ್ದಾರಿಯಲ್ಲಿ ಚತುಷ್ಪಥ ಕಾಮಗಾರಿ ಯಲ್ಲಿ ಸಮಸ್ಯೆ ಇರುವ ಸ್ಥಳಗಳನ್ನು ಹೊರತುಪಡಿಸಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿದ ಅವರು ಮೂಡುಬಿದಿರೆ ಬೈಪಾಸ್‌ ನಿರ್ಮಾಣಕ್ಕೆ ಭೂಸ್ವಾಧೀನಗೊಂಡ ಜಮೀನನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಶೀಘ್ರವೇ ಹಸ್ತಾಂತರಿಸಲು ಅಧಿಕಾರಿಗಳಿಗೆ ತಿಳಿಸಿದರು.

ಮತ್ತೆ ಕೂಳೂರು ಸೇತುವೆ ಸ್ಥಗಿತ !
ಕೂಳೂರು ಸೇತುವೆ ಕಾಮಗಾರಿ ಹಾಗೂ ಹೊಸ ಸೇತುವೆ ಬಗ್ಗೆ ಸಂಸದರು ಮಾಹಿತಿ ಪಡೆದರು. ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್‌ ಅಝಿ¾ ತಿಳಿಸಿದರು. ಇದೊಂದು ಗಂಭೀರ ಪ್ರಕರಣವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿ ಗಳ ಗಮನಕ್ಕೆ ತರಲು ಡಿಸಿ ಗೆೆ ಸೂಚಿಸಿದರು.

Advertisement

ಕೊಟ್ಟಾರ ಚೌಕಿ ಸರ್ವಿಸ್‌ ರಸ್ತೆ, ಕೆಪಿಟಿ ಓವರ್‌ ಪಾಸ್‌, ಪದುವಾ ಜಂಕ್ಷನ್‌, ನಂತೂರು ಮೇಲ್ಸೇತುವೆ ಬಗ್ಗೆ ಪರಿಶೀಲನೆ ನಡೆಸಿದ ಅವರು ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ಕರೆದು ಎಲ್ಲ ಗೊಂದಲವನ್ನು ಬಗೆಹರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಎನ್‌ಎಚ್‌ 66ರ ಅಲ್ಲಲ್ಲಿ ಸರ್ವಿಸ್‌ ರಸ್ತೆ ಇದ್ದರೂ ಹಲವು ಕಡೆ ನಿತ್ಯವೂ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳಾಗುತ್ತಿವೆ. ತಲ ಪಾಡಿಯಿಂದ ಹೆಜಮಾಡಿವರೆಗೆ ಸಂಪೂರ್ಣ ವ್ಯವಸ್ಥಿತವಾಗಿ ಸರ್ವೀಸ್‌ ರಸ್ತೆ ನಿರ್ಮಿಸುವ ಬಗ್ಗೆ ವರದಿ ತಯಾರಿಸಿ ಸಲ್ಲಿಸುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚಿಸಲಾಯಿತು.

ಬಿ.ಸಿ.ರೋಡ್‌ನಿಂದ ಸುರತ್ಕಲ್‌ ವರೆಗಿನ ಹೆದ್ದಾರಿಯನ್ನು ಹೆದ್ದಾರಿ ಪ್ರಾಧಿಕಾ ರವೇ ನಿರ್ವಹಿಸುತ್ತಿದೆ, ಈ ರಸ್ತೆಯ ನಿರ್ವ ಹಣೆಯ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನವಿದೆ. ಈ ನಿಟ್ಟಿನಲ್ಲಿ ಇದರ ನಿರ್ವಹಣೆಯನ್ನು ಬೇರೆ ಏಜೆನ್ಸಿಗಳಿಗೆ ನೀಡಲು ಸಾಧ್ಯವಿದೆಯೇ ಎಂಬ ಬಗ್ಗೆ ಪರಿಶೀಲಿಸುವಂತೆ ಅವರು ಸೂಚಿಸಿದರು.
ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿ ಶಿವಪ್ರಸಾದ್‌ ಅಜಿಲ ಮಾತನಾಡಿ, ಇಲ್ಲಿ ಸುಗಮ ಸಂಚಾರಕ್ಕೆ ಬೇಕಾದ ತಾತ್ಕಾಲಿಕ ಕಾಮಗಾರಿಗಳನ್ನು ನಡೆಸಲಾಗಿದೆ. ಗುರುವಾಯನಕೆರೆ – ಉಜಿರೆ ವರೆಗೆ 9 ಕಿ.ಮೀ ಸರ್ವಿಸ್‌ ರಸ್ತೆಯು ಯೋಜನೆಯಲ್ಲಿದೆ. ಪ್ರಸ್ತುತ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಜಿಲ್ಲಾ ಪಂಚಾಯತ್‌ ಸಿಇಒ ಡಾ|ಆನಂದ್‌.ಕೆ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್‌ ಮಹಾಪಾತ್ರ, ಪೊ.ಬೇಷನರಿ ಐಎಎಸ್‌ ಅಧಿಕಾರಿ ಪಿ.ಶ್ರವಣ್‌ ಕುಮಾರ್‌, ಮಹಾನಗರಪಾಲಿಕೆ ಆಯುಕ್ತ ಆನಂದ್‌ ಉಪಸ್ಥಿತರಿದ್ದರು.

ಜಲಜೀವನ ಮಿಶನ್‌ ತ್ವರಿತಗತಿಗೆ ಸೂಚನೆ
ಮಂಗಳೂರು
: ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸಲು ಸಂಸದ ಕ್ಯಾ|ಬ್ರಿಜೇಶ್‌ ಚೌಟ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಅವರು ಕೇಂದ್ರ ಸರಕಾರದ ಯೋಜನೆಗಳ ಅನುಷ್ಠಾನದ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

104 ಎಕ್ರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲಾಸ್ಟಿಕ್‌ ಪಾರ್ಕ್‌ ಕಾಮಗಾರಿಯನ್ನು ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಸ್ಥಗಿತಗೊಳಿಸಿ ರುವುದು ಸರಿಯಲ್ಲ. ಹಲವು ವರ್ಷಗಳ ಹಿಂದೆಯೇ ಪ್ಲಾಸ್ಟಿಕ್‌ ಪಾರ್ಕ್‌ ಮಂಜೂರು ಗೊಳಿಸಲಾಗಿತ್ತು. ಪ್ರಸ್ತುತ 32 ಕೋಟಿ ರೂ. ಅನುದಾನ ಇದ್ದರೂ, ಕಾಮಗಾರಿ ಸ್ಥಗಿತ ಗೊಂಡಿರುವುದು ಸರಿಯಲ್ಲ ಎಂದರು. ಈ ಕಾಮಗಾರಿ ಪೂರ್ಣಗೊಂಡರೆ ಸಾವಿರಾರು ಮಂದಿಗೆ ಉದ್ಯೋಗ ದೊರಕಲಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರಚಿಸಿ ಕಾಮಗಾರಿ ಮುಂದುವರಿಸಲು ಸೂಚಿಸಲಾಯಿತು,.

ಜಲಜೀವನ ಯೋಜನೆಯಡಿ ಮನೆ ಮನೆಗೆ ನೀರು ಪೂರೈಕೆಯೋಜನೆಯ ಕಾಮಗಾರಿ ಪರಿಶೀಲಿಸಿದ ಅವರು, ಯೋಜನೆಯ ಅನುಷ್ಠಾನದಲ್ಲಿ ವಿಳಂಬ ಸಲ್ಲದು. ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಈ ಯೋಜನೆಯನ್ನು ಸಮರ್ಪಕವಾಗಿ, ಅನುಷ್ಠಾನ ಗೊಳಿಸಬೇಕು. ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿ, ಪ್ರಚಾರ ಮಾಡಬೇಕು ಎಂದು ಜಿ.ಪಂ. ಸಿಇಒ ಗಳಿಗೆ ಸೂಚಿಸಿದರು.

ಉದ್ಯೋಗ ಖಾತರಿ ಯೋಜನೆಯಡಿ ಬ್ಯಾಂಕ್‌ ಸಾಲವನ್ನು ಅರ್ಹರಿಗೆ ಮಾತ್ರ ದೊರಕಬೇಕು. ಬೇರೆ ಯೋಜನೆಯ ಸಾಲವನ್ನು ಪಿಎಂಇಜಿಪಿ ಯೋಜನೆಯಡಿ ಮಂಜೂರು ಮಾಡುವುದನ್ನು ಒಪ್ಪಲಾಗದು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸಂಸದರು ಲೀಡ್‌ ಬ್ಯಾಂಕ್‌ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಎಲ್ಲ ಬ್ಯಾಂಕುಗಳು ತಮ್ಮ ಸಿಎಸ್‌ಆರ್‌ ಅನುದಾನವನ್ನು ಜಿಲ್ಲೆಗೆ ಸಮರ್ಪಕವಾಗಿ ಬಳಸಿ, ಸಾರ್ವಜನಿಕ ಉಪಯೋಗಿ ಕಾರ್ಯ ಗಳಿಗೆ ವಿನಿಯೋಗಿಸಬೇಕು.ಗ್ರಾಮೀಣ ಪ್ರದೇಶಗಳ ಬ್ಯಾಂಕ್‌ ಶಾಖೆಗಳಲ್ಲಿ ಕನ್ನಡ ಮಾತನಾಡಬಲ್ಲ ಅಧಿಕಾರಿ ಮತ್ತು ಸಿಬಂದಿ ನೇಮಕಕ್ಕೆ ಒತ್ತು ನೀಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next