Advertisement

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

04:29 PM Jun 16, 2024 | Team Udayavani |

“ರಾಖಾ’ ಹೀಗೊಂದು ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ಕನ್ನಡ ಚಿತ್ರರಂಗದ ಸಾಹಿತಿ, ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

Advertisement

ಯುವನಟ ಕ್ರಾಂತಿ ಕಥೆ ಬರೆದು, ನಾಯಕನಾಗಿ ಅಭಿನಯಿಸುತ್ತಿದ್ದು, ಶಿವಾ ಮೂವೀಸ್‌ ಮೂಲಕ ಡಾ.ಕೆ.ಬಿ. ನಾಗೂರ್‌ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

“ನಾವು ಬಿಜಾಪುರದವರು. ಶ್ರೀಸಿದ್ದೇಶ್ವರ ಸ್ವಾಮಿ ಅನುಯಾಯಿಗಳು. ಕ್ರಾಂತಿ ಅವರ ಶ್ರೀಮಂತ ಚಿತ್ರವನ್ನು ನೋಡಿದಾಗ ಅವರ ಅಭಿನಯ ಇಷ್ಟವಾಗಿತ್ತು. ಬಿಜಾಪುರದವರೆಲ್ಲ ಸೇರಿ ಈ ಚಿತ್ರ ನಿರ್ಮಿಸಲು ಮುಂದಾಗಿದ್ದೇವೆ. ತಂದೆ ಮಕ್ಕಳ ಸಂಬಂಧದ ಸುತ್ತ ನಡೆಯುವ ಕೌಟುಂಬಿಕ ಕಥೆ ಚಿತ್ರಕ್ಕಿದೆ. ಈಗ ಫ್ಯಾಮಿಲಿ ರಿಲೇಶನ್‌ ತುಂಬಾ ಕೆಟ್ಟು ಹೋಗಿದೆ. ಒಂದಷ್ಟು ಜನ ಒಳ್ಳೇದನ್ನು ಕಲಿಯಲೆಂದು ಈ ಸಿನಿಮಾ ಮಾಡ್ತಿದ್ದೇವೆ’ ಎನ್ನುವುದು ನಿರ್ಮಾಪಕ ನಾಗೂರ್‌ ಮಾತು.

ನಿರ್ದೇಶಕ ಸಾಯಿಕೃಷ್ಣ ಮಾತನಾಡಿ, “ಈ ಸಿನಿಮಾಗೆ ಡೈಲಾಗ್‌ ಬರೆಸಲೆಂದು ನನ್ನ ಬಳಿ ಬಂದವರು ನಂತರ ನೀವೇ ಡೈರೆಕ್ಷನ್‌ ಮಾಡಿ ಅಂದರು. ನಿರ್ಮಾಪಕ ಡಾ.ನಾಗೂರು ಅವರು ಲಾಭ ನಷ್ಟಗಳ ಚಿಂತೆ ಮಾಡದೆ ಸದಭಿರುಚಿಯ ಚಿತ್ರ ನೀಡಬೇಕೆಂಬ ಉದ್ದೇಶ ಇಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದಾರೆ. ತಂದೆ

ಮಕ್ಕಳ ನಡುವೆ ನಡೆಯುವ ಕಥೆಯಿದು. ಅಪ್ಪ ಮಕ್ಕಳನ್ನು ಹೇಗೆÇÉಾ ಪೋಷಣೆ ಮಾಡುತ್ತಾರೆ. ಆದರೆ, ಅದೇ ಮಕ್ಕಳು ತಮ್ಮ ಪೋಷಕರನ್ನು ಹೇಗೆ ನೋಡಿಕೊಳ್ತಾರೆ ಅನ್ನೋದು ಚಿತ್ರದ ಕಥೆ. ಚಿತ್ರದಲ್ಲಿ 4 ಹಾಡು, 4 ಸಾಹಸ ದೃಶ್ಯಗಳಿವೆ. ಬಿಜಾಪುರದಲ್ಲಿ 20 ದಿನಗಳ ಕಾಲ ಚಿತ್ರೀಕರಿಸಿ, ನಂತರ ಬೆಂಗಳೂರಲ್ಲಿ ಶೂಟಿಂಗ್‌ ಮುಂದುವರೆಸುತ್ತೇವೆ. ಬೆಂಗಳೂರಿನಲ್ಲಿ ನಡೆಯುವ ಕಥೆ ಇದಾಗಿದ್ದು, ಒಂದು ಪಾತ್ರವಷ್ಟೇ ಬಿಜಾಪುರದಿಂದ ಬರುತ್ತದೆ. ಒಟ್ಟು 40 ದಿನಗಳ ಚಿತ್ರೀಕರಣದ ಶೆಡ್ನೂಲ್‌ ಹಾಕಿಕೊಂಡಿದ್ದೇವೆ. ಅಲ್ಲದೆ ಹಾಡೊಂದಕ್ಕೆ ಸೆಟ್‌ ಹಾಕುವ ಪ್ಲಾನ್‌ ಇದೆ’ ಎಂದರು.

Advertisement

ನಾಯಕ ಕ್ರಾಂತಿ ಮಾತನಾಡಿ, “ಈ ಹಿಂದೆ ಶ್ರೀಮಂತ ಚಿತ್ರದಲ್ಲಿ ನಟಿಸಿದ್ದೆ. ರಾಖಾ ಅಂದರೆ ಬ್ರೈಟ್‌ ನೆಸ್‌. ಅದು ನಾಯಕನ ಹೆಸರೂ ಹೌದು. ಊರಲ್ಲಿ ರಾಖಾನ ತಂದೆ ತಾಯಿಗೆ ಸ್ಥಳೀಯ ಶಾಸಕನಿಂದ ಅವಮಾನ ಆಗಿರುತ್ತದೆ. ನಾಯಕ ತನ್ನ ಬುದ್ಧಿವಂತಿಕೆ ಬಳಸಿ, ರಕ್ತಪಾತವಿಲ್ಲದೆ ಹೇಗೆ ಸೇಡು ತೀರಿಸಿಕೊಳ್ಳುತ್ತಾನೆ ಎಂದು ಚಿತ್ರದಲ್ಲಿ ಹೇಳಲಾಗುತ್ತಿದೆ. ಹಿರಿಯ ನಟ ಮಂಜುನಾಥ ಹೆಗ್ಡೆ ಹಾಗೂ ಹರಿಣಿ ಅವರು ತಂದೆ, ತಾಯಿಯ ಪಾತ್ರ ಮಾಡುತ್ತಿದ್ದಾರೆ’ ಎಂದರು.

ನಟಿ ಅಮೃತಾ ನಾಯಕಿಯ ಪಾತ್ರ ನಿರ್ವಹಿಸುತ್ತಿದ್ದಾರೆ. ಛಾಯಾಗ್ರಾಹಕ ಆರ್‌.ಡಿ. ನಾಗಾರ್ಜುನ, ಕಾಮಿಡಿ ಪಾತ್ರ ಮಾಡುತ್ತಿರುವ ರಾಜು ತಾಳಿಕೋಟೆ, ಸಚ್ಚಿದಾನಂದ ಪೂಜಾರಿ ಮಾತನಾಡಿದರು

Advertisement

Udayavani is now on Telegram. Click here to join our channel and stay updated with the latest news.

Next