ರಬಕವಿ-ಬನಹಟ್ಟಿ : ಸಮಾಜದ ಪ್ರಮುಖ ಅಂಗಗಳಲ್ಲಿ ಒಂದಾಗಿರುವ ವಕೀಲರ ಮೇಲೆ ಸಾಕಷ್ಟು ಹಲ್ಲೆಯ ಪ್ರಕರಣಗಳು ನಡೆಯುತ್ತಿವೆ. ಇಂಥ ಘಟನೆಗಳು ಖಂಡನೀಯವಾಗಿವೆ. ಆದ್ದರಿಂದ ಸರ್ಕಾರ ವಕೀಲರ ರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಸ್ಥಳೀಯ ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ ತಿಳಿಸಿದರು.
ಸೋಮವಾರ ಅವರು ಬನಹಟ್ಟಿಯ ನ್ಯಾಯಾಲಯದ ಆವರಣದಲ್ಲಿ ಬಾಗಲಕೋಟೆಯಲ್ಲಿ ಮಹಿಳಾ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಮ್ಮಿಕೊಂಡ ಪ್ರತಿಭಟನಾ ಸಂದರ್ಭದಲ್ಲಿ ಮಾತನಾಡಿದರು.
ಬಾಗಲಕೋಟೆಯಲ್ಲಿ ಮಹಿಳಾ ವಕೀಲರ ಮೇಲೆ ನಡೆದ ಹಲ್ಲೆ ಖಂಡನೀಯವಾಗಿದೆ. ವಕೀಲರ ಮೇಲೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಜಾರಿಗೆ ತರಬೇಕು. ಇಂಥ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಇದೊಂದು ಅಮಾನುಷ ಕೃತ್ಯ ಎಂದು ಅಧ್ಯಕ್ಷ ಕುಲಕರ್ಣಿ ತಿಳಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಸದಸ್ಯರು ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಹಲ್ಲೆ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸುಜಾತಾ ನಿಡೋಣಿ, ಬಿ.ಎನ್.ಸತ್ತಿಕರ, ಬಸವರಾಜ ಭೂತಿ, ಭೀಮಶಿ ಯಲ್ಲಟ್ಟಿ, ರಮೇಶ ಎಕ್ಸಂಬಿ, ಅರ್ಜುನ ಜಿಡ್ಡಿಮನಿ ಸೇರಿದಂತೆ ಅನೇಕರು ಇದ್ದರು.
ಇದನ್ನೂ ಓದಿ : ಹಳೇಹುಬ್ಬಳ್ಳಿ ಗಲಭೆ ಪ್ರಕರಣ : 4 ವಿದ್ಯಾರ್ಥಿಗಳು ಸೇರಿ 7 ಮಂದಿಗೆ ಷರತ್ತು ಬದ್ದ ಜಾಮೀನು