ಹೊಸದಿಲ್ಲಿ: ಉದ್ಯೋಗಕ್ಕಾಗಿ ಜಮೀನು ಹಗರಣ ಸಂಬಂಧಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.
ಹೊಸದಿಲ್ಲಿಯಲ್ಲಿರುವ ಇಡಿ ಕಚೇರಿ ಮುಂದೆ ಬೆಳಗ್ಗೆ 11 ಗಂಟೆ ವೇಳೆಗೆ ರಾಬ್ಡಿ ಹಾಜರಾಗಿದ್ದರು. ಬಳಿಕ ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ಹೊರಬಂದಿದ್ದಾರೆ. ಅಕ್ರಮ ಹಣಕಾಸು ವರ್ಗಾವಣೆ (ತಡೆ) ಕಾಯ್ದೆ ಅನ್ವಯ ರಾಬ್ಡಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರ್‌ಜೆಡಿ ಮುಖಸ್ಥ ಲಾಲು ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದಾಗ ಇಲಾಖೆಯ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ತಮ್ಮ ಕುಟುಂಬಸ್ಥರ ಹೆಸರಿಗೆ ಅಕ್ರಮವಾಗಿ ಜಮೀನುಗಳನ್ನು ನೋಂದಣಿ ಮಾಡಿಸಿರುವ ಆರೋಪವನ್ನು ಕುಟುಂಬ ಎದುರಿಸುತ್ತಿದೆ.