Advertisement
ನಂತರ ಮಾತನಾಡಿದ ಸಚಿವರು, ಜಾಗತಿಕವಾಗಿ ರೇಬಿಸ್ ರೋಗ ನಿರ್ಮೂಲನೆಗೆ ಜಾಗೃತಿ ಮೂಡಿಸಲು, ಪ್ರತಿ ವರ್ಷ ಸೆ.28ರಂದು ವಿಶ್ವ ರೇಬಿಸ್ ದಿನ ಆಚರಿಸಲಾಗುತ್ತದೆ. ಸಾರ್ವಜನಿಕರಿಗೆ ರೇಬಿಸ್ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಉಚಿತ ಲಸಿಕೆ ಹಾಕುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯಾದ್ಯಂತ ಸೆ.30ರವರೆಗೆ 3 ದಿನಗಳ ಕಾಲ ಜರುಗಲಿದ್ದು, ರಾಜ್ಯದ ಎಲ್ಲ ಪಶು ಆಸ್ಪತ್ರೆಗಳಲ್ಲಿ ಉಚಿತವಾಗಿ ನಾಯಿಗಳಿಗೆ ಲಸಿಕೆ ನೀಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.
Related Articles
Advertisement
ಹುಚ್ಚು ನಾಯಿ ಕಡಿತಕ್ಕೊಳಗಾದ ವ್ಯಕ್ತಿ ಅಥವಾ ಜಾನುವಾರುಗಳಿಗೆ 0, 3, 7, 14, 28ನೇ ದಿನಗಳಂದು ತಪ್ಪದೇ ಲಸಿಕೆ ಕೊಡಬೇಕು. ರೋಗದ ಬಗ್ಗೆ ನಿಷ್ಕಾಳಜಿ ವಹಿಸಬಾರದು. ರೋಗ ಬಾರದಂತೆ ತಡೆಯಲು ಲಸಿಕೆಯೇ ಪ್ರಮುಖ ಅಸ್ತ್ರವಾಗಿದೆ ಎಂದರು. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಸಲಹಾ ಸಮಿತಿ ಸದಸ್ಯ ಶಿವರಾಜ ಗಂದಗೆ, ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ರವೀಂದ್ರ ಭೂರೆ, ವೈದ್ಯಾಧಿ ಕಾರಿ ಡಾ| ಬಸವರಾಜ ನಿಟ್ಟೂರೆ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ರೇಬಿಸ್‌ನಿಂದ ನರಳುತ್ತಿರುವ ಪ್ರಾಣಿ ಕಚ್ಚಿದಾಗ/ ನೆಕ್ಕಿದಾಗ ಶರೀರದೊಳಗೆ ರೇಬಿಸ್ ವೈರಾಣು ಪ್ರವೇಶಿಸಿ, ರೋಗ ಉಂಟು ಮಾಡುತ್ತದೆ. ರೇಬಿಸ್‌ನಿಂದ ನರಳುತ್ತಿರುವ ಪ್ರಾಣಿಯ ಜೊಲ್ಲಿನಿಂದ ರೇಬಿಸ್ ವೈರಾಣು ಇತರೆ ಪ್ರಾಣಿಗಳಿಗೆ ಹರಡುತ್ತದೆ. ನಾಯಿ, ಬೆಕ್ಕು, ಕುರಿ, ಮೇಕೆ, ಹಸು, ಎಮ್ಮೆ, ಕೋತಿ, ತೋಳ, ನರಿ, ಕರಡಿ, ಮುಂಗುಸಿ, ಹಂದಿ, ಕತ್ತೆ, ಕುದುರೆ ಮತ್ತು ಒಂಟೆಗಳಿಂದ ರೇಬಿಸ್ ಹರಡುತ್ತದೆ. ಆದರೆ ಭಾರತದಲ್ಲಿ ಬಹುತೇಕ ಜನರಿಗೆ ಹುಚ್ಚುನಾಯಿ ಕಡಿತದಿಂದ ರೇಬಿಸ್ ಹರಡುತ್ತದೆ.ಪ್ರಭು ಚವ್ಹಾಣ, ಉಸ್ತುವಾರಿ ಸಚಿವ