Advertisement

Rabkavi Banhatti; ಟ್ರ್ಯಾಕ್ಟರ್ ಹಾಯ್ದು ವಿದ್ಯಾರ್ಥಿನಿ ಸಾವು

06:32 PM Jan 30, 2024 | Team Udayavani |

ರಬಕವಿ ಬನಹಟ್ಟಿ : ಶಾಲೆಗೆಂದು ಮನೆಯಿಂದ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳ ಮೇಲೆ ಟ್ರ್ಯಾಕ್ಟರ್ ಹಾಯ್ದ ಪರಿಣಾಮ ಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

Advertisement

ಸಂಸ್ಕೃತಿ ಭಜಂತ್ರಿ(11) ಮೃತ ಬಾಲಕಿ. ಯಲ್ಲಟ್ಟಿ ಗ್ರಾಮದಲ್ಲಿರುವ ರಾಣಿ ಚನ್ನಮ್ಮ ವೃತ್ತದ ಬಳಿ  ಬೆಳಿಗ್ಗೆ 9:30 ರ ಸುಮಾರಿಗೆ ತನ್ನ ಮನೆಯಿಂದ ಶಾಲೆಗೆ ಸೈಕಲ್ ನಲ್ಲಿ ತೆರಳುತ್ತಿದ್ದಳು. ಟ್ರ್ಯಾಕ್ಟರ್‌ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಪೆಟ್ಟಾಗಿ ತೀವ್ರವಾಗಿ ಗಾಯಗೊಂಡಿದ್ದಳು. ಜಮಖಂಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.

ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಶಾಂತಾ ಹಳ್ಳಿ ತನಿಖೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next