ರಬಕವಿ-ಬನಹಟ್ಟಿ: ಸಮೀಪದ ಜಾಕವೆಲ್‌ನಲ್ಲಿ ಅಥಣಿ ತಾಲೂಕಿನ ಸಂಪರ್ಕಕ್ಕೆ ಮಹಿಷವಾಡಗಿ ಸೇತುವೆ ನೀರಿನ ಪ್ರಮಾಣ ಕುಸಿತದ ಕಾರಣ ಬೈಕ್ ಸವಾರರು ಹಾಗೂ ಪಾದಚಾರಿಗಳು ಸೇತುವೆ ಮೇಲೆ ಸಂಚರಿಸುತ್ತಿದ್ದು, ಬೋಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಹಲವಾರುತಿಂಗಳಿಂದ ನೀರಲ್ಲಿ ಮುಳಗಿದ್ದ ಬ್ಯಾರೇಜ್ ಕಳೆದ ಸೋಮವಾರದಿಂದ ಕಾಣುತ್ತಿದೆ. ನೀರಿನ ಮಟ್ಟ ಕೆಲ ದಿನಗಳಲ್ಲಿ ದಿಢೀರ್ ಆಗಿ ಭಾರಿ ಕುಸಿತ ಕಂಡ ಹಿನ್ನಲೆಯಲ್ಲಿ ಜನರಿಗೆ ಬೇಸಿಗೆಯ ಆತಂಕ ಶುರುವಾಗಿದೆ. ಇದೇ ರೀತಿ ಪ್ರತಿ ದಿನ ಖಾಲಿಯಾದರೆ ಏಪ್ರಿಲ್ ದ್ವಿತೀಯಾರ್ಧದಲ್ಲಿ ವಾರದಲ್ಲಿ ನೀರು ಖಾಲಿಯಾಗಬಹುದು ಎಂದು ಅಂದಾಜಿಸಲಾಗಿದೆ.
ಬೇಸಿಗೆ ಕಾರಣ ಮುಂಜಾಗೃತಾ ಕ್ರಮವಾಗಿ ನಗರಸಭೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಾರಣ ಸಾರ್ವಜನಿಕರು ನೀರನ್ನು ಮಿತವ್ಯಯವಾಗಿ ಬಳಕೆ ಮಾಡಬೇಕು. ಕೃಷ್ಣಾ ನದಿಯಲ್ಲಿ ನೀರು ನಿಂತ ನೀರಾಗಿರುವುದರಿಂದ ಸಾರ್ವಜನಿಕರು ಆರೋಗ್ಯದ ದೃಷ್ಠಿಯಿಂದ ನೀರನ್ನು ಸೋಸಿ ಕಾಯಿಸಿ ಆರಿಸಿ ನೀರನ್ನು ಕುಡಿಯಬೇಕು.
-ಜಗದೀಶ ಈಟಿ ಪೌರಾಯುಕ್ತರು, ನಗರಸಭೆ ರಬಕವಿ ಬನಹಟ್ಟಿ