Advertisement

ರೇಸ್‌, ಕ್ರಿಕೆಟ್‌ ಬೆಟ್ಟಿಂಗ್‌: ಇಬ್ಬರ ಬಂಧನ

05:38 PM Dec 08, 2022 | Team Udayavani |

ಬೆಂಗಳೂರು: ರೇಸ್‌ ಹಾಗೂ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಮರಿಯಪ್ಪನಪಾಳ್ಯ ಬಸ್‌ ನಿಲ್ದಾಣ ಸಮೀಪದ ಪೆಟ್ಟಿಗೆ ಅಂಗಡಿಯೊಂದರ ಮುಂಭಾಗ ಫ‌ುಟ್‌ಪಾತ್‌ನಲ್ಲಿ ವ್ಯಕ್ತಿಯೊಬ್ಬ ರೇಸ್‌ ಬೆಟ್ಟಿಂಗ್‌ ನಡೆಸುತ್ತಿದ್ದ. ವಾಟ್ಸ್‌ಆ್ಯಪ್‌ನಲ್ಲಿ ಬಿಎಸ್‌ಆರ್‌ ಫ್ರೆಂಡ್ಸ್‌ ಎಂಬ ಗ್ರೂಪ್‌ ತೆರೆದು ರೇಸ್‌ ಬೆಟ್ಟಿಂಗ್‌ ನಡೆಸುತ್ತಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.

ಆತನಿಂದ 1.01 ಲಕ್ಷ ರೂ. ನಗದು, ಒಂದು ಮೊಬೈಲ್‌ ವಶಕ್ಕೆ ಪಡೆಯಲಾಗಿದೆ. ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೂಂದು ಪ್ರಕರಣದಲ್ಲಿ ಯಲಹಂಕ ನ್ಯೂಟೌನ್‌ ಠಾಣೆಯ ಅಪಾರ್ಟ್‌ಮೆಂಟ್‌ವೊಂದರ ಮುಂಭಾಗದ ವ್ಯಕ್ತಿಯೊಬ್ಬ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ ನಡೆಸುದ್ದಿದ್ದಾನೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಈತನಿಂದ 51.500 ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು. ಯಲಹಂಕ ನ್ಯೂಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next