Advertisement

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

11:19 AM May 20, 2024 | Team Udayavani |

ದರ್ಶನ್‌ ನಾಯಕರಾಗಿರುವ “ಡೆವಿಲ್‌’ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ ಎಂಬ ಕುತೂಹಲ ಸಿನಿಪ್ರೇಮಿಗಳಲ್ಲಿತ್ತು. ಈಗ ಅಂತಿಮವಾಗಿ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಚಿತ್ರದಲ್ಲಿ ರಚನಾ ರೈ ನಾಯಕಿಯಾಗಿ ನಟಿಸಲಿದ್ದಾರೆನ್ನಲಾಗಿದೆ.

Advertisement

ಕರಾವಳಿ ಮೂಲದ ರಚನಾ ರೈ ಈಗಾಗಲೇ ತುಳುವಿನ “ಸರ್ಕಸ್‌’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇದಲ್ಲದೇ “ವಾಮನ’ ಚಿತ್ರದಲ್ಲೂ ರಚನಾ ನಾಯಕಿಯಾಗಿದ್ದಾರೆ. ಈಗ ದರ್ಶನ್‌ ಚಿತ್ರದಲ್ಲಿ ನಟಿಸುವ ಅವಕಾಶ ರಚನಾ ರೈಗೆ ಸಿಕ್ಕಿದೆ.

ಈಗಾಗಲೇ “ಡೆವಿಲ್‌’ ಚಿತ್ರ ಒಂದು ಹಂತದ ಚಿತ್ರೀಕರಣ ಪೂರೈಸಿದೆ. ಚಿತ್ರೀಕರಣದ ವೇಳೆ ದರ್ಶನ್‌ ಕೈಗೆ ಪೆಟ್ಟಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದರಿಂದಾಗಿ ಕೆಲವು ದಿನಗಳ ಕಾಲ ಚಿತ್ರೀಕರಣಕ್ಕೆ ಬ್ರೇಕ್‌ ನೀಡಲಾಗಿತ್ತು. ಈಗ ಮತ್ತೆ ಚಿತ್ರೀಕರಣಕ್ಕೆ ತಂಡ ಸಿದ್ಧವಾಗುತ್ತಿದೆ. ಮಿಲನಾ ಪ್ರಕಾಶ್‌ ಈ ಚಿತ್ರದ ನಿರ್ದೇಶಕರು. ಈ ಹಿಂದೆ ದರ್ಶನ್‌ ಜೊತೆ ತಾರಕ್‌ ಮಾಡಿದ ಪ್ರಕಾಶ್‌ ಈ ಬಾರಿ ಡೆವಿಲ್‌ ಮಾಡುತ್ತಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮೇಕಿಂಗ್‌ ವಿಡಿಯೋ ಬಿಡುಗಡೆ ಮಾಡಿತ್ತು ತಂಡ. ಚಿತ್ರದ ಟೀಸರ್‌ನಲ್ಲಿ ದರ್ಶನ್‌ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. “ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು. ಫೋಟೋ ತೆಗೆದರೆ ಅದಕೆ ಬಲು ಕೋಪ ಬರುವುದು. ಫೋಟೋ ತೆಗೆದ ಪಾಪು ಕೈಯ ಮುರಿದು ಬಿಡುವುದು. ಸರ್ಸು ಪಾಪು ಹೆಸರು ಕೇಳಲ್ವ? ಡೆವಿಲ್ ಎಂದು ಹೇಳಿ ದರ್ಶನ್‌ ಅವರು ಜೋರಾಗಿ ನಗುತ್ತಾರೆ. ಈ ಟೀಸರ್‌ ಗಮನ ಸೆಳೆದಿದೆ. ದರ್ಶನ್‌ ಹಾವ-ಭಾವ ಇಷ್ಟ ಆಗಿದೆ. ಅವರ ಲುಕ್‌ ಕೂಡ ಬೇರೆಯದೇ ರೀತಿಯಲ್ಲಿ ಇದೆ.

Advertisement

Udayavani is now on Telegram. Click here to join our channel and stay updated with the latest news.

Next