Advertisement

ರಾಚೇನಹಳ್ಳಿ ಡಿ ನೋಟಿಫಿಕೇಷನ್‌ ಪ್ರಕರಣ: ಬಿಎಸ್‌ವೈ ನಿರಾಳ

12:33 PM Aug 29, 2018 | Team Udayavani |

ಬೆಂಗಳೂರು: ರಾಚೇನಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ನಿರಾಳರಾಗಿದ್ದಾರೆ.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳಲ್ಲಿ ತಾಂತ್ರಿಕ ಕಾರಣಕ್ಕಾಗಿ ಬಾಕಿ ಉಳಿದಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಮುಕ್ತಾಯಗೊಳಿಸಿದೆ.

Advertisement

 ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ತಡೆ ನೀಡಿದ್ದ ಸುಪ್ರೀಂಕೋರ್ಟ್‌ ಎರಡು ತಿಂಗಳ ಹಿಂದಷ್ಟೇ ತಡೆಯಾಜ್ಞೆ ತೆರವುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ರದ್ದುಮಾಡಿದೆ.

ಡಿನೋಟಿಫಿಕೇಷನ್‌ಗೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ನಾಲ್ಕು ಪ್ರಕರಣಗಳಲ್ಲಿ ಅವರನ್ನು ಖುಲಾಸೆಗೊಳಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣಕ್ಕೆ ರಾಚೇನಹಳ್ಳಿ ಪ್ರಕರಣ ಬಾಕಿ ಉಳಿದಿದ್ದು, ಇದೀಗ ಈ ಪ್ರಕರಣವೂ ಮುಕ್ತಾಯಗೊಂಡಿದೆ.

ರಾಚೇನಹಳ್ಳಿ, ಅರಕೆರೆ, ಉತ್ತರಹಳ್ಳಿ, ಶ್ರೀರಾಂಪುರ ಮತ್ತು ನಾಗರಬಾವಿ ಪ್ರದೇಶದಲ್ಲಿ ಅಕ್ರಮವಾಗಿ ಡಿನೋಟೀಫಿಕೇಷನ್‌ಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ಯಡಿಯೂರಪ್ಪ ಹಾಗೂ ಇತರರ ವಿರುದ್ಧ ವಕೀಲ ಸಿರಾಜಿನ್‌ ಪಾಷಾ ಲೋಕಾಯುಕ್ತ ನ್ಯಾಯಾಲಯದಲ್ಲಿ 2011ರಲ್ಲಿ ಐದು ಖಾಸಗಿ ದೂರು ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next