‘ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್’ ಎಂಬ ಚಿತ್ರವೊಂದು ಚಿತ್ರೀಕರಣ ಪೂರ್ಣಗೊಳಿಸಿ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರ ಇದೇ ಜೂನ್ 2 ರಂದು ಬಿಡುಗಡೆಯಾಗುತ್ತಿದೆ.
ರಾಧಾ-ರಮಣ ಇಬ್ಬರು ಪ್ರೇಮಿಗಳು. ಒಬ್ಬರನೊಬ್ಬರು ಬಿಟ್ಟಿರದಷ್ಟು ಪ್ರೀತಿಸುವವರು. ಕಾರಣಾಂತರದಿಂದ ತಪ್ಪಿಸಿಕೊಂಡಿರುವ ರಮಣನನ್ನು ರಾಧಾ ಹುಡುಕುವುದೆ ಚಿತ್ರದ ಪ್ರಮುಖ ಕಥಾಹಂದರ ಎನ್ನುವುದು ತಂಡದ ಮಾತು.
ಸಾನ್ವಿ ಪಿಕ್ಚರ್ಸ್ ಅನಿಮೇಶನ್ಸ್‌ನಡಿ ಯಶಸ್ವಿ ಶಂಕರ್ ಹಾಗೂ ಸವಿತಾ ಯಶಸ್ವಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಎಂ.ಎನ್ ಶ್ರೀಕಾಂತ್ ನಿರ್ದೇಶಿಸಿದ್ದಾರೆ.
ನವನೀತ್ ಚರಿ ಸಂಗೀತ ನಿರ್ದೇಶನ ಹಾಗೂ ವಿಶ್ವಜಿತ್ ರಾವ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೀ ಕ್ರಿಯೇಷನ್ಸ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ. ರಾಘವ್ ರಮಣನಾಗಿ ಹಾಗೂ ಸಂಜನ ಬುರ್ಲಿ ರಾಧಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೇಖಾ, ಗೋಪಿನಾಥ್ ಭಟ್, ಚಿರಾಗ್, ಪ್ರದೀಪ್ ತಿಪಟೂರು ಗುರು ಹೆಗಡೆ ಹಾಗೂ ಯಶಸ್ವಿ ಶಂಕರ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.