Advertisement

ಮಹಾರಾಷ್ಟ್ರ “ಕೈ” ಪ್ರತಿಪಕ್ಷ ನಾಯಕ ವಿಖೆ ಪಾಟೀಲ್ ಈಗ ಬಿಜೆಪಿ ಪಾಳಯಕ್ಕೆ!

10:20 AM Jun 05, 2019 | Team Udayavani |

ಮುಂಬೈ:ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ವಿಖೆ ಪಾಟೀಲ್ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆ. ಔಪಚಾರಿಕವಾಗಿ ಪಾಟೀಲ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

Advertisement

ಇತ್ತೀಚೆಗಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಪರಾಜಯಗೊಂಡ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್ ನ ಪ್ರತಿಪಕ್ಷ ನಾಯಕರಾಗಿದ್ದ ರಾಧಾಕೃಷ್ಣ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷವನ್ನು ತೊರೆದಿರುವುದು ಪಕ್ಷಕ್ಕೆ ದೊಡ್ಡ ಹಿನ್ನೆಡೆಯಾದಂತಾಗಿದೆ. ಅಲ್ಲದೇ ಇನ್ನೂ ಹತ್ತು ಮಂದಿ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಮುಂಬರುವ ನವೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ರಾಧಾಕೃಷ್ಣ ಅವರು ಪಕ್ಷ ತೊರೆದಿರುವುದರಿಂದ ಪಕ್ಷಕ್ಕೆ ದೊಡ್ಡ ಹಿನ್ನಡೆ ಅಲ್ಲ ಎಂದು ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

ಮೂಲಗಳ ಪ್ರಕಾರ, ರಾಧಾಕೃಷ್ಣ ವಿಖೆ ಪಾಟೀಲ್ ಗೆ ಕ್ಯಾಬಿನೆಟ್ ಸಚಿವ ಸ್ಥಾನ ಕೊಡುವ ಬಗ್ಗೆ ಬಿಜೆಪಿ ಭರವಸೆ ನೀಡಿದೆಯಂತೆ. ರಾಧಾಕೃಷ್ಣ ಅವರ ಪುತ್ರ ಸುಜಯ್ ವಿಖೆ ಈಗಾಗಲೇ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೇ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಹ್ಮದ್ ನಗರದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next