Advertisement
ಟ್ವೀಟರ್‌ನಲ್ಲಿ ಬರೆದುಕೊಂಡಿರುವ ರಾಧಿಕಾ, ನಾನು ಕೊಲಂಬೋದ ಸಿನ್ನಾಮೊನ್‌ಗ್ರ್ಯಾಂಡ್ ಹೊಟೇಲ್‌ನಿಂದ ಹೊರ ಬಂದ ಕೆಲ ಹೊತ್ತಲ್ಲೇ ಸ್ಫೋಟ ಸಂಭವಿಸಿದೆ. ನನಗೆ ಈ ಆಘಾತಕಾರಿ ವಿಚಾರವನ್ನು ನಂಬಲಾಗುತ್ತಿಲ್ಲ ಎಂದು ಬರೆದಿದ್ದಾರೆ.
Related Articles
Advertisement
ಕೊಲಂಬೋ ಸೇರಿದಂತೆ ಶ್ರೀಲಂಕಾದೆಲ್ಲೆಡೆ ಹೈ ಅಲರ್ಟ್ ಘೋಷಿಸಿ ಕಟ್ಟೆಚ್ಚರ ವಹಿಸಲಾಗಿದೆ. ವಿಮಾನ ನಿಲ್ದಾಣಗಳು, ಬಸ್ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಬೆಳಗ್ಗೆ ಮೂರು ಚರ್ಚ್‌ಗಳು ಮತ್ತು ಮೂರು ಪಂಚತಾರಾ ಹೊಟೇಲ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಮಧ್ಯಾಹ್ನ ಕೊಲಂಬೋದ ದೆಹಿವಾಲಾ ಮತ್ತು ಡೆಮೊಟಗೋಡಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.
ದೆಹಿವಾಲಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಬಟ್ಟಿಕಾಲೋಯಾದ ಚರ್ಚ್‌ನಲ್ಲಿ ಮೊದಲ ನ್ಪೋಟ ಸಂಭವಸಿದ್ದು, ಬಳಿಕ ಕೊಲಂಬೋದ ಕೊಚ್ಚಿಕೊಡೆಯ ಚರ್ಚ್‌ನಲ್ಲಿ ಸ್ಫೋಟ ಸಂಭವಿಸಿದೆ.
ಈಸ್ಟರ್ ಆಚರಣೆಗಾಗಿ ಭಾರೀ ಸಂಖ್ಯೆಯ ಜನರು ಚರ್ಚ್‌ನಲ್ಲಿ ಜಮಾವಣೆಗೊಂಡಿರುವುದನ್ನು ಗುರಿಯಾಗಿರಿಸಿಕೊಂಡು ಭೀಕರ ದಾಳಿ ನಡೆಸಲಾಗಿದೆ.
ಕೊಲಂಬೋ ನಗರದಲ್ಲಿ ಸೇನಾ ಪಡೆಗಳ ತುಕಡಿಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲಾ ಭದ್ರತಾ ಸಿಬಂದಿಗಳ ರಜೆ ಕಡಿತಗೊಳಿಸಲಾಗಿದೆ.
ಸಾಮಾಜಿಕ ತಾಣಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಸೋಮವಾರ ಮತ್ತು ಮಂಗಳವಾರ ಸರ್ಕಾರಿ ರಜೆ ಘೋಷಿಸಲಾಗಿದೆ.
ಪ್ರಧಾನಿ ರಣಿಲ್ ವಿಕ್ರಮಸಿಂಘೆ ಅವರು ಭದ್ರತಾ ಸಮಿತಿಯ ತುರ್ತು ಸಭೆಯನ್ನು ಕರೆದು ಸ್ಫೋಟಗಳ ಬಗ್ಗೆ ವಿವರ ಕೇಳಿದ್ದಾರೆ.
ಸ್ಫೋಟದಲ್ಲಿ ದಾಳಿಯನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಮತ್ತು
ಯಾವ ಉಗ್ರ ಸಂಘಟನೆ ದಾಳಿ ನಡೆಸಿದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.