Advertisement

ಆಪರೇಷನ್‌ ಕಮಲಕ್ಕೆ ರಫೇಲ್‌ ಹಣ: ಆರೋಪ 

06:00 AM Sep 22, 2018 | Team Udayavani |

ಬೆಳಗಾವಿ: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಹೊಂಚು ಹಾಕಿ ಕುಳಿತಿರುವ ಬಿಜೆಪಿಯವರು ರಫೇಲ್‌
ಯುದ್ಧ ವಿಮಾನ ಖರೀದಿ ಹಗರಣದ ಹಣವನ್ನು ಆಪರೇಷನ್‌ ಕಮಲಕ್ಕೆ ಬಳಸಲು ಷಡ್ಯಂತ್ರ ನಡೆಸಿದ್ದಾರೆ
ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ ಗಂಭೀರ ಆರೋಪ ಮಾಡಿದರು. 

Advertisement

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಕೆಡವಲು ಕಿಂಗ್‌ಪಿನ್‌ಗಳನ್ನು ಬಳಸಿಕೊಂಡಿದ್ದಾರೆ. ಅವರ ಮೂಲಕ ಕಾಂಗ್ರೆಸ್‌ ಶಾಸಕರಿಗೆ ಆಮಿಷ ಒಡ್ಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಇರುವ ನಾಯಕರೇ ನಮಗೆ ಮಾಹಿತಿ ನೀಡಿದ್ದಾರೆಂದು ಆಪಾದಿಸಿದರು.

26ರಂದು ಬಿಜೆಪಿ ವಿರುದ್ಧ ಪ್ರತಿಭಟನೆ: ಕೇಂದ್ರ ಬಿಜೆಪಿ ಸರ್ಕಾರ ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ
ನಡೆಸಿರುವ ಹಗರಣದ ವಿರುದ್ಧ ತನಿಖೆಗೆ ಆಗ್ರಹಿಸಿ ಸೆ. 26ರಂದು ಪ್ರತಿಭಟನೆ ನಡೆಸಲಾಗುವುದು. ಬೆಳಗಾವಿಯ
ಚನ್ನಮ್ಮ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್‌ ಶಾಸಕರು, ಮುಖಂಡರು ಸೇರಿದಂತೆ
ಅಪಾರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next