Advertisement

 ನನಗೀಗ ಮೂವರು ಹೆಣ್ಣುಮಕ್ಕಳು –ರಾಘವೇಂದ್ರ ರಾಜ್‌ಕುಮಾರ್

11:04 AM Dec 12, 2021 | Team Udayavani |

“ರಾಜಿ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಸಹಜವಾಗಿಯೇ ಭಾವುಕರಾದ ರಾಘವೇಂದ್ರ ರಾಜ್‌ಕುಮಾರ್‌, “ನನಗೀಗ ಮೂವರು ಹೆಣ್ಣು ಮಕ್ಕಳು. ಮೂವರು ಯಾರೆಂದರೆ, ನನ್ನ ತಮ್ಮನ ಹೆಂಡತಿ ಅಶ್ವಿ‌ನಿ, ಅವರ ಮಕ್ಕಳಾದ ಧೃತಿ ಹಾಗೂ ವಂದಿತಾ.

Advertisement

ಇನ್ನು ಮುಂದೆ ಅವರೇ ನನ್ನ ಹೆಣ್ಣು ಮಕ್ಕಳು. ಈ ಸಿನಿಮಾದಿಂದ ನನಗೆ ಒಳ್ಳಯ ಹೆಸರು ಅಥವಾ ಪ್ರಶಸ್ತಿ ಬಂದರೆ, ನನ್ನ ಮೂರು ಹೆಣ್ಣುಮಕ್ಕಳಿಗೆ ಅರ್ಪಿಸುತ್ತೇನೆ’ ಎಂದು ಭಾವುಕರಾ ದರು. ಬಳಿಕ ಸಿನಿಮಾ ಬಗ್ಗೆ ಮಾತನಾಡಿದ ರಾಘಣ್ಣ, “ನನ್ನ ತಮ್ಮನ ನಿಧನದ ನಂತರ ನಾನು ಅಭಿನಯಿಸುತ್ತಿರುವ ಮೊದಲ ಸಿನಿಮಾ ಇದು.

ಅವನು ಇದಿದ್ದರೆ, ಅವನೇ ಬಂದು ಕ್ಲಾಪ್‌ ಮಾಡಬೇಕಿತ್ತು. ಆದರೆ ವಿಧಿಬರಹವೇ ಬೇರೆ. ಹೆಣ್ಣುಮಗಳೊಬ್ಬಳು ನಿರ್ದೇಶನ ಮಾಡುತ್ತಿರುವುದು ಖುಷಿಯ ವಿಚಾರ. ಗಂಡ-ಹೆಂಡತಿ ನಡುವಿನ ಸುಂದರ ಒಪ್ಪಂದವೇ ರಾಜಿ. ಇನ್ನೊಂದು ಅರ್ಥ ಕೂಡ ಇದೆ. ರಾ ಅಂದರೆ ರಾಘವೇಂದ್ರ, ಜಿ ಅಂದರೆ ಜೀವಿತಾ ಎಂದು. ನನ್ನ ಪಾತ್ರ ಚೆನ್ನಾಗಿದೆ’ ಎಂದರು.

ಸುಂದರ ಸಂಸಾರದ ಸುತ್ತ “ರಾಜಿ”

ರಾಘವೇಂದ್ರ ರಾಜ್‌ಕುಮಾರ್‌ ನಟನೆಯ “ರಾಜಿ’ ಚಿತ್ರದ ಮುಹೂರ್ತದ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ನಟ ಮುರಳಿ ಆರಂಭ ಫ‌ಲಕ ತೋರಿದರೆ, ನಾಯಕಿ ಹರ್ಷಿಕಾ ಪೂಣ್ಣತ್ಛ ಕ್ಯಾಮೆರಾ ಚಾಲನೆ ಮಾಡಿದರು.

Advertisement

ಕನ್ನಡ ಹಲವಾರು ಚಿತ್ರಗಳಲ್ಲಿ ಸಹ ಕಲಾವಿದೆಯಾಗಿ ಅಭಿನಯಿಸಿರುವ ಪ್ರೀತಿ ಎಸ್‌ ಬಾಬು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಬಸವರಾಜ್‌ ಎಸ್‌ ಮೈಸೂರು ಅವರೊಂದಿಗೆ ಸೇರಿ ನಿರ್ಮಾಣವನ್ನು ಮಾಡುತ್ತಿರುವ ಪ್ರೀತಿ ಎಸ್‌ ಬಾಬು ಈ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌ ಅವರ ಮಡದಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಅವರು, “ಸಹ ಕಲಾವಿದೆಯಾಗಿ ನನ್ನ ವೃತ್ತಿ ಜೀವನ ಆರಂಭವಾಗಿದ್ದು ಕಂಠೀರವ ಸ್ಟುಡಿಯೋದಲ್ಲಿ. ಇಂದು ನಾನು ನಿರ್ದೇಶಿಸುತ್ತಿರುವ ಮೊದಲ ಚಿತ್ರದ ಮುಹೂರ್ತ ನಡೆಯುತ್ತಿರುವುದು ಇದೇ ಸ್ಟುಡಿಯೋದಲ್ಲಿ. ಈ ಚಿತ್ರದಲ್ಲಿ ಗಂಡ – ಹೆಂಡತಿ ಸುಂದರ ಒಪ್ಪಂದದ ಈ ಕಥೆ ಬಗ್ಗೆ ರಾಘಣ್ಣನವರ ಬಳಿ ಹೇಳಿದಾಗ, ಮೆಚ್ಚುಗೆ ಸೂಚಿಸಿ ನಟಿಸಲು ಒಪ್ಪಿದ್ದಾರೆ.

ಇದನ್ನೂ ಓದಿ;– ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಸಂಘಟನೆ ಅವಶ್ಯ

ಈ ಚಿತ್ರ ಆರಂಭವಾಗಲು ಮುಖ್ಯ ಕಾರಣ ನಮ್ಮ ಚಿತ್ರದ ಛಾಯಾಗ್ರಹಕ ಪಿ.ವಿ.ಆರ್‌. ಸ್ವಾಮಿ. ಯಾರು ನಿರೀಕ್ಷಿಸದ ಕಥೆ ನಮ್ಮ ಚಿತ್ರದಲ್ಲಿದೆ’ ಎಂದರು. ವಸುಮತಿ ಉಡುಪ ಅವರ ಕಥೆಯನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಕವಿ ಹೆಚ್‌. ಎಸ್‌.ವೆಂಕಟೇಶ ಮೂರ್ತಿ ಅವರು ಹಾಡುಗಳನ್ನು ಈ ಚಿತ್ರಕ್ಕಾಗಿ ಬರೆದಿದ್ದಾರಂತೆ. ಚಿತ್ರಕ್ಕೆ ಪಿ.ವಿ.ಆರ್‌.ಸ್ವಾಮಿ ಅವರ ಛಾಯಾಗ್ರಹಣವಿದೆ.

Advertisement

Udayavani is now on Telegram. Click here to join our channel and stay updated with the latest news.

Next