Advertisement

ರಾಗಿಣಿ ಈಗ ‘ಶೀಲ’; ಮಲಯಾಳಂ ಚಿತ್ರದಲ್ಲಿ ನಟನೆ

03:41 PM Jun 25, 2023 | |

ನಟಿ ರಾಗಿಣಿ ದ್ವಿವೇದಿ ‘ಶೀಲ’ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.  ಸಸೆನ್ಸ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ.

Advertisement

“ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣು ಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ. ಈ ಪ್ಯಾನ್‌ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್‌ ಬರಲಿದೆ’ ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.

ಡಿ.ಎಂ.ಪಿಳ್ಳೆ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬಾಲು ನಾರಾಯಣನ್‌ ನಿರ್ದೇಶಿಸಿದ್ದಾರೆ. ರಾಗಿಣಿ ದ್ವಿವೇದಿ, ಅವಿನಾಶ್‌, ಶೋಭ್‌ರಾಜ್, ಚಿತ್ರಾ ಶೆಣೈ, ಮಹೇಶ್‌ ನಾಯರ್‌, ಶ್ರೀಪತಿ, ರಿಯಾಜ್‌ ಖಾನ್‌ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next