ಕೆ.ಮಂಜು ಸಿನಿಮಾಸ್ ಲಾಂಛನದಲ್ಲಿ ಕೆ.ಮಂಜು ನಿರ್ಮಿಸುತ್ತಿರುವ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ ಪ್ರಮುಖ ಪಾತ್ರದಲ್ಲಿ ನಟಿಸಲಿರುವ “ರಾಗಿಣಿ ಐಪಿಎಸ್ ವರ್ಸಸ್ ಐಎಎಸ್’ ಚಿತ್ರ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ.
Advertisement
ಇದೊಂದು ನೈಜಘಟನೆ ಆಧಾರಿತ ಚಿತ್ರವಾಗಿದ್ದು, ರಾಗಿಣಿ ದ್ವಿವೇದಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
“ಮಾನ’, “ಧ್ವನಿ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಸೆಬಾಸ್ಟಿನ್ ಡೇವಿಡ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ. ಜನಪ್ರಿಯ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದಲ್ಲಿರುತ್ತಾರೆ ಎನ್ನುವುದು ಚಿತ್ರ ತಂಡದ ಮಾಹಿತಿ.