ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿ ಸೋಮವಾರ ಬಿಡುಗಡೆಗೊಂಡರು.
ಜನವರಿ 21 ರಂದು ಜಾಮೀನು ಅಂಗೀಕಾರಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದ್ದು ನಾಲ್ಕು ದಿನಗಳ ಬಳಿಕ ಜೈಲಿನಿಂದ ರಿಲೀಫ್ ಸಿಕ್ಕಿದೆ.
ಡ್ರಗ್ ಪ್ರಕರಣದಲ್ಲಿ ರಾಗಿಣಿ ಹೆಸರು ಕೇಳಿಬಂದ ಬಳಿಕ ಸಿಸಿಬಿ ಅಧಿಕಾರಿಗಳು ಅವರ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ನಂತರ ಸಪ್ಟೆಂಬರ್ 4ರಂದು ರಾಗಿಣಿಯನ್ನು ಬಂಧಿಸಲಾಗಿತ್ತು.
ವಿಶೇಷ ನ್ಯಾಯಾಲವು ಸೆ.28ರಂದು ರಾಗಿಣಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ನಟಿ ಹೈಕೋರ್ಟ್ ಮೊರೆ ಹೋಗಿದ್ದರು.
ಇದೀಗ ಸುಪ್ರೀಂ ಕೋರ್ಟ್ ರಾಗಿಣಿಗೆ ಜಾಮೀನು ಮಂಜೂರು ಮಾಡಿದ್ದು, ಸುಮಾರು 145 ದಿನಗಳ ಕಾಲ ಸೆರೆಮನೆವಾಸ ಬಳಿಕ ರಾಗಿಣಿ ನಿಟ್ಟುಸಿರು ಬಿಡುವಂತಾಗಿದೆ.