Advertisement

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಅನುಮಾನ?

10:58 PM Dec 05, 2021 | Team Udayavani |

ಹೊಸದಿಲ್ಲಿ: ನ್ಯೂಜಿಲ್ಯಾಂಡ್‌ ಎದುರಿನ ಟೆಸ್ಟ್‌ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್‌ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ ಟೆಸ್ಟ್‌ ಮತ್ತು ಏಕದಿನ ಸರಣಿಗಳನ್ನು ಆಡಲಿದ್ದು, ಇದಕ್ಕಾಗಿ ಈ ವಾರಾಂತ್ಯದಲ್ಲಿ ಭಾರತ ತಂಡ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

Advertisement

ಈ ಸರಣಿಯಿಂದ ಫಾರ್ಮ್ ನಲ್ಲಿಲ್ಲದ ಪ್ರಮುಖ ಆಟಗಾರರನ್ನು ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಪಟ್ಟಿಯಲ್ಲಿ ಅಜಿಂಕ್ಯ ರಹಾನೆ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಈ ಬಗ್ಗೆ ಮಾತನಾಡಿದ ಬಿಸಿಸಿಐ ಅಧಿಕಾರಿಯೊಬ್ಬರು, “ರಹಾನೆ ಅತ್ಯಂತ ಕಳಪೆ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಅವರ ಆಯ್ಕೆ ತುಸು ಅನುಮಾನ ಎನ್ನಬೇಕಾಗುತ್ತದೆ.

ಒಂದು ವೇಳೆ ರಹಾನೆ ಆಯ್ಕೆಯಾದರೂ ಅವರು ಉಪನಾಯಕರಾಗಿರುವುದಿಲ್ಲ. ಈ ಜವಾಬ್ದಾರಿ ರೋಹಿತ್‌ ಶರ್ಮ ಅವರಿಗೆ ಲಭಿಸುವುದು ಬಹುತೇಕ ಖಚಿತ’ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.