Advertisement

ರಾಹುಲ್‌ 2ನೇ ಹಂತದ ಪ್ರವಾಸ 

06:50 AM Apr 01, 2018 | |

ನವದೆಹಲಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್‌ ಗಂಭೀರವಾಗಿ ತೆಗೆದುಕೊಂಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಎರಡು ಹಂತಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

Advertisement

ಏ.3-4 ಹಾಗೂ 7-8ರಂದು ರಾಜ್ಯ ಪ್ರವಾಸದಲ್ಲಿ ಪಾಲ್ಗೊಂಡು, ಏ.8ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಆ ಮೂಲಕ 14 ದಿನಗಳ ಅವರ ಮೊದಲ ಹಂತದ ಭೇಟಿ ಮುಗಿಯಲಿದೆ.

ಈ ಮಧ್ಯೆ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆಸಿ ವೇಣುಗೋಪಾಲ್‌ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ರಾಹುಲ್‌ ಗಾಂಧಿಯ ಎರಡನೇ ಹಂತದ ಪ್ರವಾಸದ ಬಗ್ಗೆ ಯೋಜನೆ ರೂಪಿಸುತ್ತಿದ್ದು, ಈ ಹಂತದಲ್ಲಿ ಸುಮಾರು 20ಕ್ಕೂ ಹೆಚ್ಚು ಸಾರ್ವಜನಿಕ ರ್ಯಾಲಿ/ಸಮಾರಂಭಗಳಲ್ಲಿ ರಾಹುಲ್‌ ಪಾಲ್ಗೊಳ್ಳಲಿದ್ದಾರೆ. ಎರಡನೇ ಹಂತದಲ್ಲಿ ಅವರು 8-9 ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next