ಹೊಸದಿಲ್ಲಿ: ಎಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರನ್ನು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ತಿಹಾರ್ ಜೈಲಿನಲ್ಲಿ ಭೇಟಿಯಾದರು.
ಪಕ್ಷದ ಹಿರಿಯ ನಾಯಕ ಚಿದಂಬರಂ ಅವರನ್ನು ಭೇಟಿಯಾಗಿ ರಾಹುಲ್, ಪ್ರಿಯಾಂಕ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.
ರಾಹುಲ್- ಪ್ರಿಯಾಂಕ ಅವರ ಬಗ್ಗೆ ಪ್ರತಿಕ್ರಿಯಿಸಿರುವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ, ಕಾಂಗ್ರೆಸ್ ಪಕ್ಷ ಚಿದಂಬರಂ ಅವರ ಜೊತೆ ಇದೆ ಎನ್ನವುದನ್ನು ಈ ಭೇಟಿ ಸಾರಿದೆ. ಕಳೆದ 99 ದಿನಗಳಿಂದ ತಂದೆಯವರು ಜೈಲಿನಲ್ಲಿದ್ದಾರೆ. ಜಾಮೀನು ಸಿಗುವ ವಿಶ್ವಾಸವಿದೆ ಎಂದಿದ್ದಾರೆ.
ಇಂದು ಸುಪ್ರೀಂ ಕೋರ್ಟ್ ನಲ್ಲಿ ಚಿದಂಬರಂ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇಡಿ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಮೇಲ್ಮನವಿ ಅರ್ಜಿ ಸಲ್ಲಿಸಿದರು.