Advertisement

ರಾಯ್ ಪುರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಮೃತರ ಕುಟುಂಬಗಳಿಗೆ ರಾಹುಲ್ ಸಂತಾಪ

11:52 AM Apr 18, 2021 | Team Udayavani |

ನವ ದೆಹಲಿ : ರಾಯ್‌ ಪುರದಲ್ಲಿ ಆಸ್ಪತ್ರೆಯ ಆಕಸ್ಮಿಕವಾಗಿ ಕಾಣಿಸಿಕೊಂಡ  ಬೆಂಕಿಯಿಂದ ಮೃತರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ(ಏ. 18) ಸಂತಾಪ ಸೂಚಿಸಿದ್ದಾರೆ.

Advertisement

ಸಂಬಂಧಿಕರನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ಛತ್ತೀಸ್ ಗಡ ಸರ್ಕಾರಕ್ಕೆ ರಾಹುಲ್ ಮನವಿ ಮಾಡಿಕೊಂಡಿದ್ದಾರೆ.

ಇನ್ನು, ಛತ್ತೀಸ್ ಗಡದ ರಾಯ್‌ ಪುರ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಕೋವಿಡ್ ಸೋಂಕಿತರು  ಮೃತಪಟ್ಟಿದ್ದಾರೆಂದು ಪೊಲೀಸರು ಭಾನುವಾರ(ಏ. 18) ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಓದಿ : ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ನಿಧನ

ಈ ದುರ್ಘಟನೆಯ ಬಗ್ಗೆ ಹಿಂದಿಯಲ್ಲಿ ನಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದ ಗಾಂಧಿ, ‘ರಾಯ್ ಪುರದ ಆಸ್ಪತ್ರೆಯೊಂದರ ತೀವ್ರ ನಿಗಾ ‍ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡ ದುಃಖಕರ.  ಘಟನೆಯಲ್ಲಿ ಮೃತಪಟ್ಟವರಿಗೆ ಶಾಂತಿ ಸಲ್ಲಿಸುತ್ತೇನೆ. ಮೃತರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

Advertisement

ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆಯೂ ಛತ್ತೀಸ್ ಗಡ ಸರ್ಕಾರಕ್ಕೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.

ರಾಯ್‌ ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ, ಒಬ್ಬರು ಬೆಂಕಿಯಿಂದ ಗಾಯಗೊಂಡಿದ್ದಾರೆ ಮತ್ತು ಮೂವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಯ ಮಾಲೀಕರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಲಾಗುವುದು. ಎಂದು ಕೂಡ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಓದಿ : ಗುಡ್ ನ್ಯೂಸ್ : ಎಲ್ ಐ ಸಿ ನೌಕರರ ವೇತನ ಹೆಚ್ಚಳಕ್ಕೆ ಕೇಂದ್ರ ಅನುಮೋದನೆ ..!

ಫ್ಯಾನ್‌ ನಲ್ಲಿನ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಬೆಂಕಿ ಕಾಣಿಸಿಕೊಂಡು ಕ್ರಮೇಣ ಇತರ ವಾರ್ಡ್‌ ಗಳಲ್ಲಿ ಹರಡಿತು ಎಂದು ಪೊಲೀಸರು ಸುದ್ದಿ ಸಂಸ್ಥೆ ಪಿಟಿಐ ಗೆ ತಿಳಿಸಿದ್ದಾರೆ.

ಓದಿ : ಪ್ರತಿಯೊಂದು ಹಬ್ಬದಲ್ಲೂ ತುಳುನಾಡಿನ ಸಾರವಿದೆ: ಮಹೇಶ್‌ ಎಸ್‌. ಶೆಟ್ಟಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next