Advertisement
ನಗರದಲ್ಲಿ ಬುಧವಾರ ಮಾತನಾಡಿ, ಕಾಂಗ್ರೆಸ್ ಪಕ್ಷ ಈ ದೇಶವನ್ನು ಕಟ್ಟುವ ಮತ್ತು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಪಾರ ತ್ಯಾಗ ಮಾಡಿದೆ. ಅಲ್ಲದೇ, ಅನೇಕ ಉತ್ತಮ ಕಾರ್ಯಕ್ರಮಗಳನ್ನು ನೀಡಿದೆ. ಕಾಂಗ್ರೆಸ್‌ಗೆ ಮತ್ತಷ್ಟು ಶಕ್ತಿ ತುಂಬಲು ಮತ್ತೆ ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು. ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಜಗದ್ಗುರುಗಳ ಆಶೀರ್ವಾದ ಪಡೆದಿರುವುದು ತಮಗೆ ಸಂತೋಷವನ್ನುಂಟುಮಾಡಿದೆ ಎಂದರು.
ಇದಕ್ಕೂ ಮೊದಲು ರಾಹುಲ್ ಅವರು, ಆದಿಶಂಕರಾಚಾರ್ಯರು ಸ್ಥಾಪಿಸಿದ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ 11.30ಕ್ಕೆ ಮಂಗಳೂರಿನಿಂದ ಆಗಮಿಸಿದ ರಾಹುಲ್ ಗಾಂ ಧಿ ಅವರೊಂದಿಗೆ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ವೀರಪ್ಪ ಮೊಯ್ಲಿ, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ರಾಜ್ಯಾಧ್ಯಕ್ಷ ಡಾ.ಜಿ.ಪರಮೇಶ್ವರ್ ಇದ್ದರು. ಕೊರಡಕಲ್ಲಿನ ಹೆಲಿಪ್ಯಾಡ್‌ನಿಂದ ಶ್ರೀಮಠಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಠದ ಆಡಳಿತಾಧಿ ಕಾರಿ ವಿ.ಆರ್. ಗೌರಿಶಂಕರ್ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಂಡರು. ನಂತರ ಶಾರದಾಂಬಾ ದೇಗುಲಕ್ಕೆ ತೆರಳಿ ದೇವಿಗೆ ಸ್ವರ್ಣ ಪುಷ್ಪಾರ್ಚನೆ ಸೇವೆ ಸಲ್ಲಿಸಿದರು.
Related Articles
Advertisement
ತುಂಗಾ ನದಿಯತ್ತ ಹೆಜ್ಜೆಹಾಕಿದ ರಾಹುಲ್, ಅಲ್ಲಿರುವ ಮೀನುಗಳಿಗೆ ಮಂಡಕ್ಕಿ ಹಾಕಿದರು. ನರಸಿಂಹವನದಲ್ಲಿರುವ ಗುರು ನಿವಾಸಕ್ಕೆ ತೆರಳಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಯವರೊಂದಿಗೆ 20 ನಿಮಿಷ ಮಾತುಕತೆ ನಡೆಸಿ ಆಶೀರ್ವಾದ ಪಡೆದರು. ನಂತರ ಶ್ರೀಮಠದ ಶ್ರೀ ಸದ್ವಿದ್ಯಾ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.