Advertisement

ಏಪ್ರಿಲ್‌ 19ರಂದು ರಾಜ್ಯದಲ್ಲಿ ರಾಹುಲ್‌ ಪ್ರಚಾರ

06:04 PM Apr 16, 2019 | Team Udayavani |

ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಏಪ್ರಿಲ್‌ 19ರಂದು ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.

Advertisement

ಎರಡನೇ ಹಂತದಲ್ಲಿ ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 23ರಂದು ಮತದಾನ ನಡೆಯಲಿದೆ. ಆ ಹಿನ್ನೆಲೆಯಲ್ಲಿ ಏಪ್ರಿಲ್‌ 19ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಈ ಮುಂಚೆ ಏಪ್ರಿಲ್‌ 18ರಂದು ರಾಹುಲ್‌ ಗಾಂಧಿ ಅವರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ, ಅಂದು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮತದಾನ ನಡೆಯುವುದರಿಂದ ಮೈತ್ರಿ ಪಕ್ಷಗಳ ನಾಯಕರು ಮತದಾನದ ಸಂದರ್ಭದಲ್ಲಿ ಕ್ಷೇತ್ರಗಳಲ್ಲಿ ಇರಬೇಕಾಗುತ್ತದೆ ಎನ್ನುವ ಕಾರಣಕ್ಕೆ ಏಪ್ರಿಲ್‌ 19ರಂದು ಪ್ರಚಾರ ಕಾರ್ಯ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next