Advertisement

ರಾಯಚೂರು, ಚಿಕ್ಕೋಡಿಯಲ್ಲಿ ನಾಳೆ ರಾಹುಲ್‌ ಪ್ರಚಾರ

09:43 AM Apr 18, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ನಾಳೆ (ಏ.19) ರಾಜ್ಯಕ್ಕೆ ಆಗಮಿಸಲಿದ್ದಾರೆ.

Advertisement

ಏ.19 ರಂದು ರಾಯಚೂರು ಹಾಗೂ ಚಿಕ್ಕೋಡಿಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 1 ಗಂಟೆಗೆ ವಿಜಯನಗರದ ಜಿಂದಾಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳ್ಳಾರಿಯಿಂದ ರಾಯಚೂರಿಗೆ ತೆರಳಿ, ನಗರದ ಮಹಾತ್ಮಾ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಕಾಶ್‌ ಹುಕ್ಕೇರಿ ಪರವಾಗಿ ಆರ್‌.ಡಿ. ಕಾಲೇಜ್‌ ಮೈದಾನದಲ್ಲಿ ಏರ್ಪಡಿಸಿರುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಅಂದು ಸಂಜೆ 7 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಏ.21 ರಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಏ.21 ರಂದು ಕೊಪ್ಪಳದ ರಾಮನಗರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಅಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಾಥ್‌ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next