Advertisement

NEET ಆಕಾಂಕ್ಷಿಗಳಿಗೆ ರಾಹುಲ್‌ ಅಭಯ : ಸಂಸತ್‌ನಲ್ಲಿ ಧ್ವನಿ ಎತ್ತುವೆ

01:42 AM Jun 10, 2024 | Team Udayavani |

ಹೊಸದಿಲ್ಲಿ: ನೀಟ್‌-ಯುಜಿ ವಿವಾದದ ಹಿನ್ನೆಲೆಯಲ್ಲಿ ರವಿವಾರನಿಯೋಜಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, “ಮೋದಿ ಅವರು ಪ್ರಮಾಣವಚನ ಸ್ವೀಕರಿಸುವು ಆದಕ್ಕೂ ಮುನ್ನವೇ ನೀಟ್‌ ಪರೀಕ್ಷೆಯಲ್ಲಾದ ಅವ್ಯವ ಹಾರಗಳು 24 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಬದುಕನ್ನು ನಾಶ ಮಾಡಿಬಿಟ್ಟಿತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಜತೆಗೆ, ಸಂಸತ್‌ನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ ಮತ್ತು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಎತ್ತುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. 1,500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿರುವ ವಿಚಾರದ ಮರುಪರಿಶೀಲನೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) 4 ಸದಸ್ಯರ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಏಕೈಕ ಪರೀಕ್ಷಾ ಕೇಂದ್ರದ 6 ವಿದ್ಯಾರ್ಥಿಗಳು ಗರಿಷ್ಠ ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಇನ್ನೂ ಅನೇಕ ಮಂದಿ ಗರಿಷ್ಠ ಅಂಕಗಳನ್ನು ಪಡೆದಿದ್ದು, ತಾಂತ್ರಿಕವಾಗಿ ಇದು ಸಾಧ್ಯವಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಯಾಗಿರಬಹುದು ಎಂಬ ವಾದಗಳನ್ನೂ ಸರಕಾರ‌ ಅಲ್ಲಗಳೆಯುತ್ತಿದೆ ಎಂದು ರಾಹುಲ್‌ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next