Advertisement

ಮೋದಿ ಉಪನಾಮ ಪ್ರಕರಣದಲ್ಲಿ Rahul ಗೆ ಮತ್ತೆ ಸಂಕಷ್ಟ: ತಡೆಯಾಜ್ಞೆ ನೀಡಲು ಕೋರ್ಟ್ ನಕಾರ

11:19 AM Apr 20, 2023 | Team Udayavani |

ಸೂರತ್: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮನವಿಯ ಕುರಿತು ಸೂರತ್ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ತಡೆಯಾಜ್ಞೆ ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿದೆ.

Advertisement

ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.

ವಯನಾಡ್‌ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್‌ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next