ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ.
Advertisement
ರಾಹುಲ್ ಗಾಂಧಿ ಭೇಟಿ ವೇಳೆ ಹೊಸ ಬಜೆಟ್ ಮಂಡಿಸುವ ಕುರಿತು ಚರ್ಚಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಹೊಸ ಬಜೆಟ್ ಮಂಡನೆ ಬೇಡ.
ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
Related Articles
Advertisement
ಈ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಹೊಸ ಬಜೆಟ್ ಮಂಡನೆಗೆ ರಾಹುಲ್ ಗಾಂಧಿ ಹಸಿರು ನಿಶಾನೆ ಕೊಟ್ಟಿದ್ದಾರೆ. ಅಷ್ಟಕ್ಕೂ ಸಿದ್ದರಾಮಯ್ಯ ಅವರು ಹೊಸ ಬಜೆಟ್‌ಗೆ ವಿರೋಧಿಸಿಲ್ಲ. ತಮ್ಮ ಅನುಭವದ ಆಧಾರದ ಮೇಲೆ ಹೊಸ ಬಜೆಟ್ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರಷ್ಟೆ. ಇದರಲ್ಲಿ ಭಿನ್ನಮತಕ್ಕೆ ಆಸ್ಪದವಾಗುವ ಯಾವುದೇ ವಿಚಾರ ಇಲ್ಲ ಎಂದರು.
ಸೌಹಾರ್ದ ಭೇಟಿ ಎಂದ ಸಿಎಂರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ,
ಇದೊಂದು ಸೌಹಾರ್ದ ಭೇಟಿ ಎಂದಿದ್ದಾರೆ. ಸಂಪುಟ ವಿಸ್ತರಣೆ ಗೊಂದಲ ಕಾಂಗ್ರೆಸ್‌ನ ಆಂತರಿಕ ವಿಚಾರವಾಗಿದ್ದು, ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಲಾಗಿದೆ. ಪಕ್ಷದೊಳಗಿನ ಸಮಸ್ಯೆಗಳನ್ನು ಆಂತರಿಕವಾಗಿ ಚರ್ಚಿಸಿ ಬಗೆಹರಿಸುವುದಾಗಿ ಅವರು ಹೇಳಿದ್ದಾರೆ. ಉಳಿದಂತೆ ಈ ವಿಚಾರದಲ್ಲಿ ಚರ್ಚೆ ಮಾಡಿಲ್ಲ ಎಂದರು. ರಾಜ್ಯದ ಅಭಿವೃದಿಟಛಿಗೆ ಪೂರಕವಾದ ಸಲಹೆಗಳನ್ನು ರಾಹುಲ್ ಗಾಂಧಿ ನೀಡಿದ್ದಾರೆ. ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರ ಜತೆಗೆ ಸುಭದ್ರ ಸರ್ಕಾರ ನಡೆಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆ ಉದ್ದೇಶ ಈಡೇರಲು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಸಿಎಂ ಮತ್ತು ರಾಹುಲ್ ಭೇಟಿ ವೇಳೆ ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿ ಡ್ಯಾನಿಶ್ ಅಲಿ, ಕೆ.ಸಿ.ವೇಣುಗೋಪಾಲ್ ಇದ್ದರು.