Advertisement

Prajwal Revanna ವಿರುದ್ಧ ರಾಹುಲ್‌ ಗಾಂಧಿ ಆರೋಪ: ಹೈಕೋರ್ಟ್‌ಗೆ ಅರ್ಜಿ

12:02 AM Jul 31, 2024 | Team Udayavani |

ಬೆಂಗಳೂರು: ಹಲವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಟೀಕಿಸುವ ಭರದಲ್ಲಿ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಮಾನ ಹಾನಿಯಾಗುವಂತೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

Advertisement

ರಾಹುಲ್‌ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಆಲ್‌ ಇಂಡಿಯಾ ದಲಿತ್‌ ಆ್ಯಕ್ಷನ್‌ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷ ಚಿ.ನಾ.ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್‌ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.

ರಾಹುಲ್‌ ಗಾಂಧಿ, ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗ, ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next