Advertisement

ಮಹತ್ವ ಪಡೆದುಕೊಂಡ ರಾಹುಲ್ ಮುರುಘಾ ಮಠ ಭೇಟಿ : 20ಕ್ಕೂ ಹೆಚ್ಚು ಮಠಾಧೀಶರ ಜೊತೆಗೆ ಸಂವಾದ

11:20 AM Aug 03, 2022 | Team Udayavani |

ಚಿತ್ರದುರ್ಗ: ಇಲ್ಲಿನ ಐತಿಹಾಸಿಕ ಮುರುಘಾ ಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಡಾ. ಶ್ರೀ‌ಶಿವಮೂರ್ತಿ ಮುರುಘಾ ಶರಣರಿಂದ ಆಶೀರ್ವಾದ ಪಡೆದುಕೊಂಡರು.

Advertisement

ಇದೇ ವೇಳೆ ಮಠದಲ್ಲಿ ಸುಮಾರು 20ಕ್ಕೂ ಹೆಚ್ಚು ಮಠಾಧೀಶರ ಜೊತೆಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು.

ಇತ್ತೀಚೆಗೆ ಮಾದಾರ ಚನ್ನಯ್ಯ ಗುರುಪೀಠಕ್ಕೆ ಆರೆಸ್ಸೆಸ್ಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ‌ ನೀಡಿ ಅಲ್ಲಿಯೇ ವಾಸ್ತವ್ಯ ಹೂಡಿದ್ದ ಹಿನ್ನೆಲೆಯಲ್ಲಿ ರಾಹುಲ್ ಭೇಟಿ ಮಹತ್ವ ಪಡೆದುಕೊಂಡಿದೆ.

ಕಳೆದ ತಿಂಗಳಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡಾ ಮುರುಘಾ ಮಠಕ್ಕೆ ಭೇಟಿ‌ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ರಾಹುಲ್ ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next