Advertisement

ರಾಹುಲ್ ಗಾಂಧಿಗೆ ಮರಳಿದ ಸಂಸದ ಸ್ಥಾನ: ಚುನಾವಣೆಗೂ ಸ್ಪರ್ಧೆ ನಡೆಸಬಹುದು ರಾಗಾ

05:48 PM Aug 04, 2023 | keerthan |

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಂದು ಸರ್ವೋಚ್ಛ ನ್ಯಾಯಾಲಯವು ಬಿಗ್ ರಿಲೀಫ್ ನೀಡಿದ್ದು, 2019ರ ಮಾನನಷ್ಟ ಪ್ರಕರಣದಲ್ಲಿ ಸೂರತ್ ಕೋರ್ಟ್ ನೀಡಿದ ಶಿಕ್ಷೆ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಇದರೊಂದಿಗೆ ರಾಹುಲ್ ಗಾಂಧಿ ಅವರಿಗೆ ಸಂಸದ ಸ್ಥಾನವೂ ಮರಳಿದೆ.

Advertisement

ಕಳೆದ ಮಾರ್ಚ್ 23ರಂದು 2019ರ ಮೋದಿ ಸರ್ ನೇಮ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ತೀರ್ಪು ನೀಡಿತ್ತು. ಇದರ ಮರುದಿನ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಮಧ್ಯಂತರ ಆದೇಶ ನೀಡಿದ ಪರಿಣಾಮ ಸಂಸದ ಸ್ಥಾನ ಮರಳಿದ್ದು ಮಾತ್ರವಲ್ಲದೆ, ಅವರಿನ್ನು ಚುನಾವಣೆಗೂ ಸ್ಪರ್ಧೆ ನಡೆಸಬಹುದಾಗಿದೆ.

ರಾಹುಲ್ ಗಾಂಧಿಗೆ ಗರಿಷ್ಠ ಶಿಕ್ಷೆ ವಿಧಿಸಲು ಸೂರತ್ ನ್ಯಾಯಾಲಯ ಯಾವುದೇ ಕಾರಣವನ್ನು ನೀಡಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಇದನ್ನೂ ಓದಿ:ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ ಮಾಡಿದ ಕಾಳಿಂಗ ಫೌಂಡೇಶನ್

Advertisement

“ಗರಿಷ್ಠ ಶಿಕ್ಷೆ ವಿಧಿಸಲು ವಿಚಾರಣಾ ನ್ಯಾಯಾಧೀಶರು ಯಾವುದೇ ಕಾರಣವನ್ನು ನೀಡಿಲ್ಲ, ಅಂತಿಮ ತೀರ್ಪಿನವರೆಗೆ ಅಪರಾಧ ನಿರ್ಣಯದ ಆದೇಶವನ್ನು ತಡೆಹಿಡಿಯಬೇಕಾಗಿದೆ” ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಆದಾಗ್ಯೂ, ಕಾಂಗ್ರೆಸ್ ನಾಯಕನ ಉಚ್ಚಾರಣೆಗಳು ಉತ್ತಮ ಅಭಿರುಚಿಯಲ್ಲಿರಲಿಲ್ಲ” ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಸಾರ್ವಜನಿಕ ಜೀವನದಲ್ಲಿ ಒಬ್ಬ ವ್ಯಕ್ತಿಯು ಸಾರ್ವಜನಿಕ ಭಾಷಣ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದಿದೆ.

ರಾಹುಲ್ ಗಾಂಧಿಯವರು 2019 ರಲ್ಲಿ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾಡಿದ ಭಾಷಣದ ವೇಳೆ”ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ?” ಎಂದು ಹೇಲಿದ್ದರು. ಇದನ್ನು ಪ್ರಶ್ನಿಸಿ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು ಕೋರ್ಟ್ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next